ಬಂಟ್ವಾಳ (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ನೆಹರುನಗರ ರಾಷ್ಟ್ರೀಯ ಹೆದ್ದಾರಿ ಬದಿಯ ಗುಡ್ಡಕ್ಕೆ ಶನಿವಾರ ಅಪರಾಹ್ನ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸ್ಥಳದಲ್ಲಿ ಬೆಂಕಿಯ ಜ್ವಾಲೆ ಧಗಧಗಿಸಲು ಆರಂಭಿಸಿತ್ತು. ಪರಿಸರದಲ್ಲಿ ಹಲವು ವಾಸ್ತವ್ಯದ ಮನೆಗಳು, ಅಂಗಡಿಗಳು ಹಾಗೂ ಮಸೀದಿ ಮೊದಲಾದವುಗಳಿದ್ದು, ಅಪಾಯದ ಮುನ್ಸೂಚನೆ ಅರಿತ ಸ್ಥಳೀಯರು ತಕ್ಷಣ ಬಂಟ್ವಾಳ ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಾಚರಣೆಯ ಬಳಿಕ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
0 comments:
Post a Comment