ಬೆಂಗಳೂರು (ಕರಾವಳಿ ಟೈಮ್ಸ್) : ಕನ್ನಡದ ಖ್ಯಾತ ಸಾಹಿತಿ ಚಂದ್ರಕಾಂತ ಕುಸನೂರ (90) ಅವರು ಶನಿವಾರ ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.
ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳು ಹಾಗೂ ರಂಗಕರ್ಮಿಗಳು. ಇವರು 1931ರಲ್ಲಿ ಕಲಬುರಗಿಯ ಕುಸನೂರಲ್ಲಿ ಜನಿಸಿದರು. ಎಂ.ಎ, ಬಿ.ಇಡಿ ಪದವೀಧರರಾಗಿರುವ ಇವರು ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು. ಕಲಬುರಗಿಯಲ್ಲಿ “ರಂಗ ಮಾಧ್ಯಮ” ಎಂಬ ನಾಟಕ ಸಂಸ್ಥೆಯ ಸ್ಥಾಪಕರಾಗಿದ್ದರು. ಕನ್ನಡದಲ್ಲಿ ಅಬ್ಬರ್ಡ್ ಮಾದರಿ ನಾಟಕಗಳನ್ನು ರಚಿಸಿದ್ದಾರೆ.
1975ರಲ್ಲಿ ಇವರ “ಯಾತನಾ ಶಿಬಿರ” ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಲಭಿಸಿದ್ದು, 1992ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ಪಡೆದಿದ್ದಾರೆ. 2006ನೇ ಸಾಲಿನ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ಪುರಸ್ಕøತರಾಗಿದ್ದರು. ಮೃತರು ಪತ್ನಿ, ನಾಲ್ಕು ಮಂದಿ ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
0 comments:
Post a Comment