ಬಂಟ್ವಾಳ (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶದಂತೆ ಸಜಿಪನಡು ಗ್ರಾಮದ ನೋಡಲ್ ಅಧಿಕಾರಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಅವರು ಸಜಿಪನಡು ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ 500 ಮೀಟರ್ ವ್ಯಾಪ್ತಿಯ ಕಂಟೆನ್ಮೆಂಟ್ ಪ್ರದೇಶದಲ್ಲಿ ತೆರೆಯಲಾದ ಕಂಟ್ರೋಲ್ ರೂಂಗೆ ಬೇಟಿ ಮಾಡಿ ಪರಿಶೀಲನೆ ನಡೆಸಿದರು.
500 ಮೀಟರ್ ವ್ಯಾಪ್ತಿಯ ಎಲ್ಲಾ ಆಯಕಟ್ಟಿನ ಪ್ರದೇಶಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಿದರು. ಸಜಿಪನಡು ಗ್ರಾಮದ ಪೋಲೀಸ್ ಚೆಕ್ ಪೋಸ್ಟ್ ನಲ್ಲಿ ಬಿಗಿ ಬಂದೋಬಸ್ತ್ ಮಾಡುವಂತೆ ಸೂಚಿಸಿದರು. ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನಗಳ ತಪಾಸಣೆ ನಡೆಸಿದರು. ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
0 comments:
Post a Comment