ರಾಮನಗರ : ರಸ್ತೆ ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು - Karavali Times ರಾಮನಗರ : ರಸ್ತೆ ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು - Karavali Times

728x90

21 April 2020

ರಾಮನಗರ : ರಸ್ತೆ ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು



ಪಬ್ಲಿಕ್ ಟಿವಿ ವರದಿಗಾರ ಹನುಮಂತು ಮೃತ್ಯು

ಮಾಜಿ ಸಿ.ಎಂ. ಕುಮಾರಸ್ವಾಮಿಯಿಂದ 5 ಲಕ್ಷ ಪರಿಹಾರ ಘೋಷಣೆ


ರಾಮನಗರ (ಕರಾವಳಿ ಟೈಮ್ಸ್) : ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತ ರಸ್ತೆ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಅವರೇ ಮೃತ ಪತ್ರಕರ್ತ. ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗದಲ್ಲಿ ಕರ್ತವ್ಯ ಮುಗಿಸಿದ ಬೈಕಿನಲ್ಲಿ ಬರುತ್ತಿದ್ದ ಹನುಮಂತು ಅವರ ಬೈಕಿಗೆ ಎಟಿಎಂ ಹಣ ಸಾಗಿಸುತ್ತಿದ್ದ ವಾಹನ ಡಿಕ್ಕಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಹನುಮಂತು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಅಪಘಾತಕ್ಕೆ ಕಾರಣವಾದ ವಾಹನ ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕಿ ಸಂತಾಪ, ಮಾಜಿ ಸಿಎಂ 5 ಲಕ್ಷ ಪರಿಹಾರ ಘೋಷಣೆ


ಪತ್ರಕರ್ತ ಹನುಮಂತು ನಿಧನಕ್ಕೆ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ಮಾಜಿ ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಮೃತ ಪತ್ರಕರ್ತರ ಕುಟುಂಬಕ್ಕೆ 6 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅಪಘಾತದಿಂದ ಮೃತಪಟ್ಟ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ತನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು. ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು. ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಕರ್ತವ್ಯ ನಿರ್ವಹಣೆ ವೇಳೆ ಪ್ರಾಣತೆತ್ತ ಹನುಮಂತು ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಕುಮಾರ ಸ್ವಾಮಿ ಟ್ವೀಟ್‍ನಲ್ಲಿ ಸಂತಾಪ ಸೂಚಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ರಾಮನಗರ : ರಸ್ತೆ ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು Rating: 5 Reviewed By: karavali Times
Scroll to Top