ಗೋಧಿ-ಸೀಮೆ ಎಣ್ಣೆ ನೀಡದಿದ್ದರೂ ನೀಡಿದೆ ಎಂದು ರಶೀದಿಯಲ್ಲಿ ನಮೂದು
ಬೆಂಗಳೂರು (ಕರಾವಳಿ ಟೈಮ್ಸ್) : ನ್ಯಾಯಬೆಲೆ ಅಂಗಡಿಗಳಲ್ಲಿ ವಂಚನೆ ಪ್ರಕರಣಗಳ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿದ್ದು, ಸರಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ರಾಜ್ಯದ ಪಡಿತರ ಅಂಗಡಿಗಳಲ್ಲಿ ಗೋಧಿ ಮತ್ತು ಸೀಮೆ ಎಣ್ಣೆ ನೀಡದೆ ಇದ್ದರೂ ಅವುಗಳನ್ನು ನೀಡಲಾಗಿದೆ ಎಂದು ಪಾವತಿ ರಶೀದಿಯಲ್ಲಿ ನಮೂದಿಸಿ ಬಳಕೆದಾರರಿಂದ ಸಹಿ ಹಾಕಿಸಿಕೊಳ್ಳುತ್ತಿರುವ ವಂಚನೆಯ ಪ್ರಕರಣಗಳ ಬಗ್ಗೆ ದೂರುಗಳು ಬರುತ್ತಿವೆ.
ಈ ಬಗ್ಗೆ ಮುಖ್ಯಮಂತ್ರಿ ತಕ್ಷಣ ಗಮನಹರಿಸಿ ಕ್ರಮಕ್ಕೆ ಮುಂದಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಲಾಕ್‍ಡೌನ್ ಸಂದರ್ಭದಲ್ಲಿ ಬಡವರಿಗೆ ತೊಂದರೆಯಾಗಬಾರದು ಎಂದು ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ನೀಡಲು ಸರÀಕಾರ ನಿರ್ಧರಿಸಿದೆ. ಈ ಬಗ್ಗೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೂ ಸೂಚನೆ ನೀಡಲಾಗಿದೆ. ಸ್ವತಃ ಆಹಾರ ಸಚಿವ ಕೆ. ಗೋಪಾಲಯ್ಯ ಅವರು ಕೆಲವು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆಯನ್ನೂ ನಡೆಸಿದ್ದಾರೆ. ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿರ್ಲಕ್ಷ್ಯ ತೋರಿದ ಕೆಲವು ಅಂಗಡಿಗಳನ್ನು ಅಮಾನತುಗೊಳಿಸಲಾಗಿದೆ. ಈ ಮಧ್ಯೆ ಸಿದ್ದರಾಮಯ್ಯ ಕೂಡ ಸರಕಾರದ ಗಮನ ಸೆಳೆದಿದ್ದಾರೆ.
0 comments:
Post a Comment