ರಾಯಚೂರು (ಕರಾವಳಿ ಟೈಮ್ಸ್) : ಕೊರೊನಾ ವೈರಸ್ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್‍ಡೌನ್ ಆಗಿದ್ದರೂ ಜನ ರಸ್ತೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾ ಎಸ್ಪಿ ವೇದಮೂರ್ತಿ ಅವರು ರಸ್ತೆಯಲ್ಲೇ ಕೊರೋನಾ ಜಾಗೃತಿ ಸಂಗೀತ ಹಾಡುವ ಮೂಲಕ ಜನರನ್ನು ಬೀದಿಯಿಂದ ಮನೆಗೆ ಕಳುಹಿಸುವ ಪ್ರಯತ್ನಕ್ಕೆ ಮುಂದಾಗಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗಿದೆ.
ಜಿಲ್ಲಾ ಪೆÇೀಲಿಸ್ ಅಧೀಕ್ಷಕ ಡಾ. ಸಿ.ಬಿ. ವೇದಮೂರ್ತಿ ಸ್ವತಃ ನಗರದ ಪ್ರಮುಖ ವೃತ್ತಗಳಲ್ಲಿ ಕೊರೊನಾ ಜಾಗೃತಿ ಹಾಡು ಹಾಡಿ ಜನರನ್ನ ಮನೆಗೆ ಕಳುಹಿಸುತ್ತಿದ್ದಾರೆ. ನಗರದ ತೀನ್ ಕಂದಿಲ್, ಗಂಜ್ ವೃತ್ತ ಸೇರಿ ವಿವಿಧೆಡೆ ವೇದಮೂರ್ತಿ ಅವರು ಹಾಡು ಹೇಳುವ ಮೂಲಕ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಕೊರೊನಾ ಹಿನ್ನೆಲೆ ಲಾಕ್‍ಡೌನ್ ಇದ್ದರೂ ನಗರದಲ್ಲಿ ಜನ ಓಡಾಡುವುದು ಕಡಿಮೆಯಾಗಿಲ್ಲ. ಲಾಠಿ ಏಟಿಗೂ ಬಗ್ಗಲಿಲ್ಲ, ಬೈಕ್ ಜಪ್ತಿ ಮಾಡಿದರೂ ಜನ ಜಗ್ಗಲಿಲ್ಲ. ಹೀಗಾಗಿ ಕೊನೆಗೆ ಕರೊಕೆ ಹಾಡು ಹೇಳುವ ಮೂಲಕ ಡಾ ವೇದಮೂರ್ತಿ ಜಾಗೃತಿ ಮೂಡಿಸುತ್ತಿದ್ದಾರೆ.
“ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ ಹಾಡಿನ ದಾಟಿಯಲ್ಲೇ ‘ಮನೆಯಲ್ಲಿಯೋ ಮನುಸ ಬಂದೈತೋ ಕೊರೊನಾ ವೈರಸಾ, ಕಾಲ ಕಾಲಕ್ಕೆ ಕೈತೊಳೆಯಬೇಕು” ಎಂದು ಹಾಡುವ ಮೂಲಕ ಜನ ಜಾಗೃತಿ ಕೈಗೊಂಡಿದ್ದಾರೆ.
ಈಗಾಗಲೇ ಡ್ರೋಣ್ ಕ್ಯಾಮೆರಾ ಬಳಸುವ ಮೂಲಕ ನಗರದ ಬಡಾವಣೆಗಳಲ್ಲಿ ಜನ ಸೇರದಂತೆ ತಡೆಯಲು ಕ್ರಮವಹಿಸಲಾಗಿದೆ. ಡ್ರೋಣ್ ಕ್ಯಾಮೆರಾ ಮೂಲಕ ಜನರನ್ನು ಚದುರಿಸುವ ಕೆಲಸವನ್ನೂ ಪೆÇಲೀಸ್ ಇಲಾಖೆ ಮಾಡುತ್ತಿದೆ.
0 comments:
Post a Comment