ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಕೊರೋನಾ ವೈರಸ್ ಹಾವಳಿ ಮುಂದುವರೆದಿರುವ ಹಿನ್ನಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಠಿಣವಾಗಿದೆ. ಈ ನಿಟ್ಟಿನಲ್ಲಿ ಪರೀಕ್ಷೆಯನ್ನೇ ರದ್ದುಪಡಿಸುವಂತೆ ಪ್ರಾಥಮಿಕ, ಪ್ರೌಢಶಾಲಾ ಕಾರ್ಯದರ್ಶಿಗಳಿಗೆ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಎಸ್ ಹಿರೇಮಠ್ ಅವರು ಪತ್ರ ಬರೆದ್ದು, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನೇ ರದ್ದು ಪಡಿಸುವಂತೆ ಹಾಗೂ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಬರೆದ ಪರೀಕ್ಷೆಗಳನ್ನು ಆಧರಿಸಿ ಗ್ರೇಡಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಧಾರವಾಡ ವಿಭಾಗ ಶಿಕ್ಷಣಾಧಿಕಾರಿಗಳು ಈ ಕುರಿತು ಸಭೆ ನಡೆಸಿದ್ದು, ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. 700 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ವೇಳೆ ಸಾರಿಗೆ ವ್ಯವಸ್ಥೆ ಸಂದರ್ಭ ಹಾಗೂ ಪರೀಕ್ಷಾ ಕೇಂದ್ರಗಳ ಒಳಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಠಿಣ ಎಂದು ಅಭಿಪ್ರಾಯಪಡಲಾಗಿದೆ.
ಪ್ರತೀ ಪರೀಕ್ಷಾ ಕೇಂದ್ರದಲ್ಲೂ 350 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಿಸುವುದು ಸಾಧ್ಯವಿಲ್ಲ ಎಂಬ ಅಭಿಪ್ರಾಯಗಳೂ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಪರೀಕ್ಷೆ ರದ್ದು ಪ್ರಸ್ತಾಪ ಸಲ್ಲಿಸಲಾಗಿದೆ ಎನ್ನಲಾಗಿದೆ.
0 comments:
Post a Comment