ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ನೇತೃತ್ವದಲ್ಲಿ ಪೌರ ಕಾರ್ಮಿಕರು ಬಿ.ಸಿ.ರೋಡಿನ ಸೋಮಾಯಾಜಿ ಆಸ್ಪತ್ರೆ, ಕೈಕಂಬದ ಪರ್ಲಿಯಾ ಆಸ್ಪತ್ರೆ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಕಚೇರಿ, ಬಂಟ್ವಾಳ ನಗರ ಪೆÇಲೀಸ್ ಠಾಣೆ, ಗೃಹರಕ್ಷಕ ದಳ ಕಚೇರಿ, ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಗಳಿಗೆ ದ್ರಾವಣ ಸಿಂಪಡಿಸಿದರು.
ಕಳೆದ ಕೆಲ ದಿನಗಳ ಹಿಂದೆ ಬಿ.ಸಿ.ರೋಡು, ಬಂಟ್ವಾಳ ಪೇಟೆಗಳಲ್ಲಿ ರಾಸಾಯನಿಕ ದ್ರಾವಣ ಸಿಂಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪುರಸಭಾ ವ್ಯಾಪ್ತಿಯ ಎಲ್ಲಾ ಬ್ಯಾಂಕ್‍ಗಳಿಗೆ ದ್ರಾವಣ ಸಿಂಪಡಿಸುವುದಾಗಿ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸಮುದಾಯ ಸಂಘಟಕಿ ಉಮಾವತಿ, ಸಹಾಯಕ ಇಂಜಿನಿಯರ್ ಮುಹಮ್ಮದ್ ಇಕ್ಬಾಲ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
0 comments:
Post a Comment