ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನಸಭಾ ಕ್ಷೇತ್ರದ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ಮುತುವರ್ಜಿಯಿಂದ ತೆಂಕಬೆಳ್ಳೂರು ವಲಯ ಕಾಂಗ್ರೆಸ್ ವತಿಯಿಂದ ಕೊರೋನಾ ಲಾಕ್‍ಡೌನ್‍ನಿಂದ ಸಮಸ್ಯೆ ಅನುಭವಿಸಿದ ಬಡವರಿಗೆ ಆಹಾರ ಸಾಮಾಗ್ರಿಗಳನ್ನು ಗುರುವಾರ ವಿತರಿಸಲಾಯಿತು.
ಈ ಸಂದರ್ಭ ತೆಂಕಬೆಳ್ಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಬೆಳ್ಳೂರುಬೆಟ್ಟು, ಪುಷ್ಪರಾಜ್ ಶೆಟ್ಟಿ, ಗಾಡ್ವಿನ್ ಫೆರ್ನಾಂಡಿಸ್, ದೇವಿಪ್ರಸಾದ್ ಚೌಟ, ಮುಕೇಶ್ ಬಂಗೇರ, ಜಯರಾಮ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment