ಉಡುಪಿ (ಕರಾವಳಿ ಟೈಮ್ಸ್) : ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಹಾಗೂ ಮುದ್ರಕರ ಸೌಹಾರ್ದ ಸಹಕಾರಿ ನಿ ಉಡುಪಿ ಇವುಗಳ ಜಂಟಿ ಆಶ್ರಯದಲ್ಲಿ ಬಡ ಕುಟುಂಬಗಳಿಗೆ 15 ದಿನಗಳ ಪೂರ್ತಿ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.
ಮುದ್ರಕರ ಸೌಹಾರ್ದ ಸಹಕಾರಿ ನಿ. ಅಧ್ಯಕ್ಷ ಬಿ.ಜಿ. ಸುಬ್ಬರಾವ್, ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಅಧ್ಯಕ್ಷ ಎಂ. ಮಹೇಶ್ ಕುಮಾರ್, ಪೂರ್ವಾಧ್ಯಕ್ಷ ಯು. ಮೋಹನ್ ಉಪಾಧ್ಯ, ಜಿಲ್ಲಾ ಕಾರ್ಯದರ್ಶಿ ಮನೋಜ್ ಕಡಬ, ಗೌರವ ಸಲಹೆಗಾರ ಅಶೋಕ್ ಶೆಟ್ಟಿ, ಪೂರ್ವಾಧ್ಯಕ್ಷ ರಮೇಶ್ ತಿಂಗಳಾಯ, ಸಂಘದ ನಿರ್ದೇಶಕರುಗಳಾದ ಶೇಖರ್ ಜತ್ತನ್, ರಮೇಶ್ ಕುಂದರ್, ರಮೇಶ್ ನಾಯ್ಕ್, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್ ಮತ್ತು ಶೆರ್ಲಿಮನೋಜ್ ಈ ಸಂದರ್ಭ ಉಪಸ್ಥಿತರಿದ್ದರು.
0 comments:
Post a Comment