ನವದೆಹಲಿ (ಕರಾವಳಿ ಟೈಮ್ಸ್) : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಿತಾಮಹ ಆನಂದ್ ಸಿಂಗ್ ಬಿಶ್ತ್ (89) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಾ 15 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಗ್ಗೆ 10.44ಕ್ಕೆ ನಿಧನರಾದರು ಎಂದು ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.
ಭಾನುವಾರ ಆದಿತ್ಯನಾಥ್ ಅವರ ತಂದೆಯವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು, ವೆಂಟಿಲೇಟರ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯು ವಾರ್ಡಿಗೆ ಸ್ಥಳಾಂತರಿಸುವ ಮೊದಲು ಅವರು ಭಾನುವಾರ ಡಯಾಲಿಸಿಸ್‍ಗೆ ಒಳಗಾಗಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
0 comments:
Post a Comment