ಬಂಟ್ವಾಳ (ಕರಾವಳಿ ಟೈಮ್ಸ್) : ಈಗಾಗಲೇ ಎರಡು ಸಾವು ಸಂಭವಿಸಿ ಕೊರೋನಾ ಹಾಟ್‍ಸ್ಪಾಟ್ ಆಗಿ ಗುರುತಿಸಿಕೊಂಡಿರುವ ಬಂಟ್ವಾಳ ತಾಲೂಕಿನಲ್ಲಿ ಭಾನುವಾರ ಮತ್ತೊಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಎಪ್ರಿಲ್ 21 ರಂದು ಕೊರೋನಾ ವೈರಸ್ಸಿನಿಂದ ಮೃತಪಟ್ಟ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಸಿಬ್ಬಂದಿಯಾಗಿರುವ ನರಿಕೊಂಬು-ನಾಯಿಲ ನಿವಾಸಿ 48 ವರ್ಷದ ಮಹಿಳೆಯ ಗಂಟಲ ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ವೃದ್ಧೆ ಎಪ್ರಿಲ್ 21 ರಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ವೃದ್ದೆಯ ಸಂಪರ್ಕದಿಂದ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಿಳೆಗೆ ಇದೀಗ ಸೋಂಕು ದೃಢಪಟ್ಟಿದೆ.
ವೃದ್ಧೆ ಮೃತಪಟ್ಟ ತಕ್ಷಣ ಆಸ್ಪತ್ರೆ ಸಿಬ್ಬಂದಿಯನ್ನು ಮಂಗಳೂರಿನಲ್ಲಿ ಕ್ವಾರಂಟೈನ್‍ನಲ್ಲಿ ಮಾಡಲಾಗಿತ್ತು. ಗಂಟಲ ದ್ರವದ ಮಾದರಿ ವರದಿ ಬಂದ ಬಳಿಕ ಕೊರೊನಾ ಇರುವುದು ದೃಢಪಟ್ಟಿದೆ.
0 comments:
Post a Comment