ಬೆಂಗಳೂರು (ಕರಾವಳಿ ಟೈಮ್ಸ್) : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇರುವ ವಲಸೆ ಕಾರ್ಮಿಕರು ಮತ್ತು ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಭಾನುವಾರ 500 ಕೆಎಸ್ ಆರ್ ಟಿಸಿ ಬಸ್ ಗಳು ಸಂಚರಿಸಿದ್ದು, ಸೋಮವಾರ ಮತ್ತೆ 500 ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಂಚರಿಸುವಾಗ ಪ್ರತಿಯೊಬ್ಬರ ಹೆಸರು, ಮೊಬೈಲ್ ಸಂಖ್ಯೆಯನ್ನು ಪಡೆದು, ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಿದ ನಂತರವೇ ಪ್ರಯಾಣಕ್ಕೆ ಅವಕಾಶ £ೀಡಲಾಗಿದೆ. ಇದನ್ನು ಇನ್ನು ಎರಡು ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಕೆಎಸ್‍ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಮೆಜೆಸ್ಟಿಕ್ £ಂದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಬಸ್ ಸಂಚರಿಸಿದವು.
ಕೆಂಪೇಗೌಡ ಬಸ್ £ಲ್ದಾಣದ ಟರ್ಮಿನಲ್ 1ರಿಂದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮಂಗಳೂರು, ಮಡಿಕೇರಿ, ಉಡುಪಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆಗೆ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿತ್ತು.
0 comments:
Post a Comment