ಬಂಟ್ವಾಳ (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸಜಿಪಮುನ್ನೂರು, ಮಾಣಿ, ಗೋಳ್ತಮಜಲು, ಕೊಳ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಎಲ್ಲಾ ಆಶಾ ಕಾರ್ಯಕರ್ತರಿಗೆ ಗೌರವರ್ಪಣೆ ಶನಿವಾರ ನಡೆಯಿತು.
ಊರಿನ ಜನರಲ್ಲಿ ಕೊವಿಡ್-19 ಬಗ್ಗೆ ಜಾಗೃತಿ ಮೂಡಿಸಿ ಗ್ರಾಮದ ಆರೋಗ್ಯಕ್ಕಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತರಿಗೆ ಮಾಜಿ ಸಚಿವರು ಶಾಲು ಹೊದಿಸಿ ದಿನ ಬಳಕೆ ಸಾಮಗ್ರಿಗಳನ್ನು ನೀಡಿ ಗೌರವಿಸಿದರು.
ಮೊದಲನೇಯದು ಮಾಜಿ ಸಚಿವರ ನಿವಾಸದಲ್ಲಿ ಎರಡನೇಯದು ಮಂಚಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಮೂರನೇಯದು ಮಾಣಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಎಸ್ ಮೊಹಮ್ಮದ್, ಮಂಜುಳಾ ಮಾವೆ, ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಎ.ಪಿ.ಎಂ.ಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ತಾ. ಪಂ. ಸದಸ್ಯೆ ಮಂಜುಳಾ ಕುಶಲ, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment