ಬೆಂಗಳೂರು (ಕರಾವಳಿ ಟೈಮ್ಸ್) : ಲಾಕ್‍ಡೌನ್ ಕಾರಣದಿಂದ ವಿವಿಧ ದೇಶಗಳಲ್ಲಿ ಸಂಕಷ್ಟಕ್ಕೊಳಗಾಗಿರುವ ಅನಿವಾಸಿ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ ಅಭಿಯಾನದಡಿ ಮೂರನೇ ವಿಮಾನ ಮಸ್ಕತ್‍ನಿಂದ ಇಂದು ರಾತ್ರಿ ಆಗಮಿಸಿದೆ.
ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಇಂದು ರಾತ್ರಿ ಆಗಮಿಸಿದ ವಿಮಾನದಲ್ಲಿ ಒಟ್ಟು 178 ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 115 ಮಂದಿ ಬೆಂಗಳೂರು ನಿಲ್ದಾಣದಲ್ಲಿ ಇಳಿದಿದ್ದು, ಇವರೆಲ್ಲರನ್ನೂ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ. ಉಳಿದ ಪ್ರಯಾಣಿಕರು ರಾತ್ರಿ ಸುಮಾರು 8.05ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದಾರೆ.
ಪ್ರಯಾಣಿಕರು ಇಳಿದ ನಂತರ ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಯಿತು. ನಂತರ ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪ್ರಯಾಣಿಕರಿಗೆ ಸ್ಟಾಂಪಿಂಗ್ ಮಾಡಿ, ಇಮಿಗ್ರೇಷನ್ ಪ್ರಕ್ರಿಯೆ ನಡೆಸಲಾಯಿತು. ಪ್ರಯಾಣಿಕರನ್ನು ನಿಗದಿತ ಕ್ವಾರೆಂಟೈನ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಬಸ್ಸಿನ ವ್ಯವಸ್ಥೆ ಮಾಡಲಾಗಿತ್ತು.
0 comments:
Post a Comment