ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ |
ಬಂಟ್ವಾಳ (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ನಿರ್ದೇಶನದಂತೆ ಸಾರ್ವಜನಿಕರ ಹಿತದೃಷ್ಟಿಗಾಗಿ ಮೇ 4 ರಿಂದ ಬಂಟ್ವಾಳದಲ್ಲಿ ಲಾಕ್‍ಡೌನ್ ಸಡಿಲಿಕೆ ಆಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸರಕಾರದ ಎಲ್ಲಾ ನಿರ್ದೇಶನಗಳನ್ನು ಪಾಲಿಸುವ ಮೂಲಕ ಕೊರೋನಾ ಹೋರಾಟ ಮುಂದುವರಿಸುವಂತೆ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಪುರವಾಸಿಗಳಿಗೆ ಕರೆ ನೀಡಿದ್ದಾರೆ.
ಜನ ತಮ್ಮ ಆರೋಗ್ಯದ ಬಗ್ಗೆ ವೈಯಕ್ತಿಕ ಜಾಗೃತೆ ವಹಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡದೆ ಸಾಮಾಜಿಕ ಅಂತರವನ್ನು ಕಾಪಾಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಒಬ್ಬರಿಗೊಬ್ಬರು ಮಾತನಾಡುವಾಗ ಕನಿಷ್ಠ 1.5 ಮೀಟರ್ ಅಂತರವನ್ನು ಕಾಯ್ದುಕೊಳ್ಳುವುದು, ದಿನಸಿ ಖರೀದಿಗಾಗಿ ಅಥವಾ ಇನ್ನಿತರ ಕೆಲಸ ಕಾರ್ಯಗಳಿಗಾಗಿ ಸರತಿ ಸಾಲಲ್ಲಿ ನಿಲ್ಲುವಾಗ ಛತ್ರಿ ಬಳಸಿದರೆ ಬಿಸಿಲಿನಿಂದ ರಕ್ಷಣೆ ಹೊಂದುವುದರ ಜೊತೆಗೆ ಸಾಮಾಜಿಕ ಅಂತರವನ್ನು ಕಾಪಾಡಲು ಸಹಕಾರಿಯಾಗಬಹುದು ಮುಖ್ಯಾಧಿಕಾರಿ ಸಲಹೆ ನೀಡಿದ್ದಾರೆ.
0 comments:
Post a Comment