ಬಂಟ್ವಾಳ (ಕರಾವಳಿ ಟೈಮ್ಸ್) : ಬೈಪಾಸು ಬಳಿ ರಸ್ತೆ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಬಿ.ಸಿ.ರೋಡು ಮತ್ತು ಪಾಣೆಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯು ತುಂಡಾಗಿದ್ದು, ದುರಸ್ತಿ ಕಾರ್ಯ ನಡೆಯುತ್ತಿದೆ.
ನಿನ್ನೆ ಸಂಜೆಯಿಂದ ದುರಸ್ತಿ ಕಾರ್ಯ ನಡೆಯುತ್ತಿದ್ದು, ಇಂದು ಸ್ಥಳಕ್ಕೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಭೇಟಿ ನೀಡಿ ಕೊಳವೆ ಶೀಘ್ರ ದುರಸ್ತಿಗೊಳಿಸಿ ನೀರು ಸರಬರಾಜು ವ್ಯವಸ್ಥೆಗೊಳಿಸುವಂತೆ ಸೂಚಿಸಿದರು. ಇಂತಹ ಪ್ರದೇಶದಲ್ಲಿ ತಡೆಗೋಡೆ ಹಾಗೂ ಚರಂಡಿ ಕಾಮಗಾರಿ ನಡೆಸಿ ಸ್ಥಳೀಯರಿಗೆ ತೊಂದರೆಯಾಗದ ರೀತಿ ರಸ್ತೆ ಕಾಮಗಾರಿ ನಡೆಸುವಂತೆ ತಿಳಿಸಿದರು.
ಈ ಸಂಧರ್ಭ ಬುಡಾ ಅಧ್ಯಕ್ಷ ಬಿ ದೇವದಾಸ್ ಶೆಟ್ಟಿ, ಸ್ಥಳೀಯ ಪುರಸಭಾ ಸದಸ್ಯ ಹರಿಪ್ರಸಾದ್, ಬುಡಾ ಸದಸ್ಯ ಬಾಸ್ಕರ ಟೈಲರ್, ಅರ್ಕಮೆ ನರಸಿಂಹ ಮಯ್ಯ, ರಸ್ತೆ ಕಾಮಗಾರಿ ಮೇಲ್ವಿಚಾರಕರು ಉಪಸ್ಥಿತರಿದ್ದರು.
0 comments:
Post a Comment