ಬಂಟ್ವಾಳ (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವಕಾಶ ಮಾಡಿಕೊಡುವಂತೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಬೆಂಗಳೂರಿನ ಸಚಿವರ ಕಛೇರಿಯಲ್ಲಿ ಬೇಟಿಯಾಗಿ ಮಾತುಕತೆ ನಡೆಸಿದರು.
ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಈ ಸಮಸ್ಯೆ ಬಗ್ಗೆ ಮಂಜೇಶ್ವರ ಮಂಡಲ ಬಿಜೆಪಿ ಅಧ್ಯಕ್ಷ ಮಣಿಕಂಠ ರೈ ಬಂಟ್ವಾಳ ಶಾಸಕರ ಗಮನಕ್ಕೆ ತಂದಿದ್ದರು.
0 comments:
Post a Comment