ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಕಸಬಾ ಗ್ರಾಮದ ಬಂಟ್ವಾಳ ಪೇಟೆಯ ಕೊರೋನಾ ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದ ಪ್ರದೇಶದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
ಸರಕಾರ ಜಾರಿಗೊಳಿಸಿದ ಅದೇಶವನ್ನು ಉಲ್ಲಂಘಿಸಿ ಕಂಟೈನ್ ಮೆಂಟ್ ಝೋನ್ ಒಳಗೆ ಸುಮಾರು ಆರು ಜನರ ಗುಂಪು ಸೇರಿ ಪ್ರತಿಭಟನೆ ನಡೆಸಿದ ಬಗ್ಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ನೀಡಿದ ದೂರಿನಂತೆ ಕಲಂ : 269, 270 ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment