ದೂರು ದಾಖಲಾದರೂ ಮಾಹಿತಿ ನೀಡಲು ನಿರಾಕರಿಸುತ್ತಿರುವ ಪೊಲೀಸರು
ಹಲ್ಲೆಗೈದ ವ್ಯಕ್ತಿ ಪ್ರಭಾವಿಯಾಗಿರುವುದೇ ಕಾರಣ ಎಂದು ಆರೋಪಿಸುತ್ತಿರುವ ಸ್ಥಳೀಯರು
ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಬಿ ಮೂಡ ಗ್ರಾಮದ ಚಿಕ್ಕಯ ಮಠ ನಿವಾಸಿ, ಹುಟ್ಟು ಭಿನ್ನಚೇತನ ವ್ಯಕ್ತಿ ಪುಷ್ಪರಾಜ ಪೂಜಾರಿ ಎಂಬವರಿಗೆ ಪ್ರತಿಷ್ಠಿತ ರೋಟರಿ ಸಂಸ್ಥೆಯ ಮುಂದಾಳು ಬಂಟ್ವಾಳದ ರಿತೇಶ್ ಬಾಳಿಗ ಎಂಬವರು ಏಕಾಏಕಿ ಗಂಭೀರ ಹಲ್ಲೆ ನಡೆಸಿದ್ದಾರೆ ಎಂದು ಬಂಟ್ವಾಳ ನಗರ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.
ಗೂಡಿನಬಳಿಯ ರೋಟರಿ ಸಭಾ ಭವನದಲ್ಲಿ ಭಿನ್ನಚೇತನ ವ್ಯಕ್ತಿ ಪುಷ್ಪರಾಜ ಪೂಜಾರಿ ಅವರು ಕಳೆದ ಹಲವು ವರ್ಷಗಳಿಂದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಗುರುವಾರ ಇವರ ಬಳಿ ಬದ ರಿತೇಶ್ ಬಾಳಿಗಾ ಸಭಾ ಭವನದ ವಿಷಯಕ್ಕೆ ಸಂಬಂಧಿಸಿ ಮಾತುಕತೆ ನಡೆಸಿ ಬಳಿಕ ಏಕಾಏಕಿ ಅವರ ಎದೆಗೆ ಹೊಡೆದು, ಗಂಭೀರ ಹಲ್ಲೆ ನಡೆಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿರುತ್ತಾರೆ ಎಂದು ಆರೋಪಿಸಲಾಗಿದೆ.
ಹುಟ್ಟು ಭಿನ್ನಚೇತನರಾಗಿರುವ ಪುಷ್ಪರಾಜ ಪೂಜಾರಿ ಅವರು ಹಲ್ಲೆಯಿಂದಾಗಿ ಗಂಭೀರ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದ್ದರೂ ಈ ಬಗ್ಗೆ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹಲ್ಲೆ ನಡೆಸಿ ವ್ಯಕ್ತಿ ಪ್ರಭಾವಿಯಾಗಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಯಿಸಿರುವ ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್ಸೈ ಸಂತೋಷ್ ಅವರು ಪ್ರಕರಣ ನಡೆದಿದೆ. ಈ ಬಗ್ಗೆ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನನ್ನ ಬಳಿ ಇಲ್ಲ ಎಂದಿದ್ದಾರೆ.
ಸಂತ್ರಸ್ತ ಭಿನ್ನಚೇತನ ವ್ಯಕ್ತಿಯ ಆರೋಗ್ಯ ವಿಚಾರಿಸಲು ಬಂಟ್ವಾಳ ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಕೋರ್ಯ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್, ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ£ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಲೋಕೇಶ್ ಸುವರ್ಣ ಅಲೆತ್ತೂರು, ಪುರುಷೋತ್ತಮ ಪೇಲತ್ತಿಮಾರ್, ಯೋಗೀಶ್ ಪೂಜಾರಿ ಚಿಕ್ಕಯಮಠ ಹಾಗೂ ಸ್ಥಳೀಯ ಮುಖಂಡರು ಆಸ್ಪತ್ರೆಗೆ ಬೇಟಿ ನೀಡಿದ್ದು, ಬಡ ಭಿನ್ನಚೇತನ ವ್ಯಕ್ತಿಗೆ ಆಗಿರುವ ಅನ್ಯಾಯದ ವಿರುದ್ದ ಉಗ್ರ ಹೋರಾಟ ನಡೆಸಲಾಗುವುದು ಎಂದಿದ್ದಾರೆ.
0 comments:
Post a Comment