ಜುಲೈ 30, 31 ರಂದು ಸಿಇಟಿ ಪರೀಕ್ಷೆ, ಪದವಿ ತರಗತಿಗಳು ಸೆಪ್ಟೆಂಬರ್‍ನಲ್ಲಿ ಆರಂಭ : ಸಚಿವ ಅಶ್ವಥ ನಾರಾಯಣ - Karavali Times ಜುಲೈ 30, 31 ರಂದು ಸಿಇಟಿ ಪರೀಕ್ಷೆ, ಪದವಿ ತರಗತಿಗಳು ಸೆಪ್ಟೆಂಬರ್‍ನಲ್ಲಿ ಆರಂಭ : ಸಚಿವ ಅಶ್ವಥ ನಾರಾಯಣ - Karavali Times

728x90

13 May 2020

ಜುಲೈ 30, 31 ರಂದು ಸಿಇಟಿ ಪರೀಕ್ಷೆ, ಪದವಿ ತರಗತಿಗಳು ಸೆಪ್ಟೆಂಬರ್‍ನಲ್ಲಿ ಆರಂಭ : ಸಚಿವ ಅಶ್ವಥ ನಾರಾಯಣ



ಬೆಂಗಳೂರು (ಕರಾವಳಿ ಟೈಮ್ಸ್) : ಕೋವಿಡ್-19 ಸೋಂಕಿನ ಕಾರಣದಿಂದ ಮುಂದೂಡಲ್ಪಟ್ಟಿದ್ದ ಸಿಇಟಿ ಪರೀಕ್ಷೆಗಳು ಜುಲೈ 30 ಹಾಗೂ 31ರಂದು ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಹೇಳಿದರು.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಎಂದಿನಂತೆ ಆಫ್‍ಲೈನ್‍ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗುತ್ತದೆ. ಸಾಮಾಜಿಕ ಅಂತರವನ್ನು ಕಾಪಾಡಬೇಕಾಗಿರುವ ಕಾರಣ ಕೊಠಡಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬೇಕಾಗುತ್ತದೆ. ಹೀಗಾಗಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ ಎಂದರು.

ಈ ಮೊದಲು ಎಪ್ರಿಲ್ 22, 23 ಹಾಗೂ 24 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು. ದ್ವೀತಿಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದ್ದು, ಶೀಘ್ರವೇ ಪಿಯುಸಿ ಬೋರ್ಡ್ ದಿನಾಂಕವನ್ನು ನಿಗದಿ ಮಾಡಲಿದೆ. ಪದವಿ ತರಗತಿಗಳು ಈ ಬಾರಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ. ಪರೀಕ್ಷೆ, ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಮೆಡಿಕಲ್ ಸೀಟ್ ಬ್ಲಾಕಿಂಗ್ ವಿಚಾರದ ಬಗ್ಗೆ ಮಾತನಾಡಿದ ಸಚಿವ ಅಶ್ವಥ ನಾರಾಯಣ ಈ ಬಗ್ಗೆ ಈಗಾಗಲೇ ಕಮಿಟಿ ರಚನೆ ಮಾಡಿ ವರದಿ ನೀಡಿದೆ. ವರದಿ ಏನಿದೆ ಎಂದು ಸಚಿವರು ನೋಡಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.

ಎಂಜಿನಿಯರಿಂಗ್ ಸೀಟ್ ಶುಲ್ಕ ಹೆಚ್ಚಳ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ, ಶುಲ್ಕ ಹೆಚ್ಚಳ ಮಾಡಬೇಕು ಅಂತ ಮನವಿ ಬಂದಿದೆ. ಈ ಬಗ್ಗೆ ಸರಕಾರ ಏನು ನಿರ್ಧಾರ ಮಾಡಿಲ್ಲ. ಕೊರೊನಾ ಇರುವ ಕಾರಣ ಈ ಬಾರಿ ಅಡ್ಮಿಷನ್ ಆಗುವುದೇ ದೊಡ್ಡ ವಿಷಯವಾಗಲಿದೆ. ಶುಲ್ಕ ಹೆಚ್ಚಳದ ಬಗ್ಗೆ ವೈಜ್ಞಾನಿಕ ದೃಷ್ಟಿಯಿಂದ ಚಿಂತನೆ ಮಾಡಿ ನಿರ್ಧಾರ ಮಾಡಲಾಗುವುದು ಎಂದವರು ತಿಳಿಸಿದರು. 
  • Blogger Comments
  • Facebook Comments

0 comments:

Post a Comment

Item Reviewed: ಜುಲೈ 30, 31 ರಂದು ಸಿಇಟಿ ಪರೀಕ್ಷೆ, ಪದವಿ ತರಗತಿಗಳು ಸೆಪ್ಟೆಂಬರ್‍ನಲ್ಲಿ ಆರಂಭ : ಸಚಿವ ಅಶ್ವಥ ನಾರಾಯಣ Rating: 5 Reviewed By: karavali Times
Scroll to Top