ಬೆಂಗಳೂರು (ಕರಾವಳಿ ಟೈಮ್ಸ್) : ಜುಲೈ 30 ಹಾಗೂ 31 ರಂದು ನಡೆಯಲಿರುವ ಸಿಇಟಿ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಜುಲೈ 30 ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆ ನಡೆಯಲಿದ್ದು, 31 ರಂದು ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್ 1 ರಂದು ಹೊರನಾಡು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಜುಲೈ 30 ಹಾಗೂ 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಘೋಷಿಸಿದ್ದರು. ಇದರ ಬೆನ್ನಲ್ಲೇ ಪರೀಕ್ಷಾ ಪ್ರಾಧಿಕಾರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.
0 comments:
Post a Comment