ಬಸ್, ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ, ಪ್ರತೀ ಭಾನುವಾರ ಕಂಪ್ಲೀಟ್ ಲಾಕ್‍ಡೌನ್ - Karavali Times ಬಸ್, ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ, ಪ್ರತೀ ಭಾನುವಾರ ಕಂಪ್ಲೀಟ್ ಲಾಕ್‍ಡೌನ್ - Karavali Times

728x90

18 May 2020

ಬಸ್, ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ, ಪ್ರತೀ ಭಾನುವಾರ ಕಂಪ್ಲೀಟ್ ಲಾಕ್‍ಡೌನ್



ರಾಜ್ಯದಲ್ಲಿ ಲಾಕ್‍ಡೌನ್ 4.0 ಮಾರ್ಗಸೂಚಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ 

ಮೇ.31ರವರೆಗೂ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗುಜರಾತ್ ಜನತೆಗೆ ರಾಜ್ಯ ಪ್ರವೇಶಕ್ಕೆ ಅವಕಾಶವಿಲ್ಲ


ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಇಂದಿನಿಂದ ನಾಲ್ಕನೇ ಹಂತದ ಲಾಕ್‍ಡೌನ್ ಜಾರಿಯಾಗಿದ್ದು, ಇದರ ಸಂಪೂರ್ಣ ಮಾರ್ಗಸೂಚಿಯನ್ನು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಿ  ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಾನೂನು ಮೀರಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಜನರ ಓಡಾಟಕ್ಕಾಗಿ ನಾಳೆಯಿಂದ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಸೇರಿದಂತೆ ಎಲ್ಲ ಬಸ್‍ಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‍ಡೌನ್ 4.0ಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕೇಂದ್ರ ಸರಕಾರ ಜಾರಿ ಮಾಡಿದೆ. ಅದಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಸಂಪುಟದ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದವರು ತಿಳಿಸಿದರು.

ಒಂದು ಬಸ್ಸಿನಲ್ಲಿ ಕೇವಲ 30 ಜನರಿಗೆ ಮಾತ್ರ ಪ್ರಯಾಣ ಮಾಡುವ ಅವಕಾಶ ನೀಡಲಾಗಿದೆ. ಬಸ್‍ನಲ್ಲಿ ಪ್ರಯಾಣಿಸುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸದೆ ಪ್ರಯಾಣಿಸಿದೆ ದಂಡ ವಿಧಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಹೊರ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಮಾಡುವ ನಿರ್ಧಾರ ಮುಂದುವರಿಸಲು ನಿರ್ಧರಿಸಲಾಗಿದೆ. ಬೇರೆ ರಾಜ್ಯದಿಂದ ಅನವಶ್ಯಕವಾಗಿ ಬರಲು ಅವಕಾಶವಿಲ್ಲ ಎಂದು ಸಿಎಂ ತಿಳಿಸಿದರು.

ಆಟೋ, ಟ್ಯಾಕ್ಸಿ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅವರಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಾಳೆಯಿಂದ ಮಾಲ್, ಸಿನಿಮಾ ಥಿಯೇಟರ್, ಹೋಟೆಲ್ ಬಿಟ್ಟು ಉಳಿದ ಎಲ್ಲ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ರಾಜ್ಯದೊಳಗೆ ಓಡಾಡಲು ರೈಲುಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಹೊರಗಡೆಯಿಂದ ಬರುವ ರೈಲುಗಳಿಗೆ ಅವಕಾಶ ನೀಡುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

ಸೆಲೂನ್ ತೆರೆಯಲು ಅನುಮತಿ ನೀಡಲಾಗಿದೆ. ಪ್ರತೀ ಭಾನುವಾರ ಇಡೀ ದಿನ ಸಂಪೂರ್ಣ ಲಾಕ್‍ಡೌನ್ ಇರಲಿದೆ. ಈ ದಿನ ಜನರ ಓಡಾಟಕ್ಕೂ ಅವಕಾಶ ಇರುವುದಿಲ್ಲ ಎಂದ ಯಡಿಯೂರಪ್ಪ ಬೆಳಗ್ಗೆ 7 ರಿಂದ 9 ಹಾಗೂ ಸಾಯಂಕಾಲ 5 ರಿಂದ 7 ಗಂಟೆವರೆಗೆ ಎಲ್ಲ ಪಾರ್ಕ್‍ಗಳಲ್ಲಿ ಓಡಾಟ ಮಾಡಲು ಅವಕಾಶ ನೀಡಲಾಗಿದೆ. ಬಸ್ ದರ ಸದ್ಯಕ್ಕೆ ಹೆಚ್ಚಿಸುವುದಿಲ್ಲ. ಈಗ ಆಗಿರುವ ನಷ್ಟವನ್ನು ಸರಕಾರವೇ ತುಂಬಿಕೊಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಚಾಲಕ ಸೇರಿ ಮೂವರು ಮಾತ್ರ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡಬಹುದು. ಇನ್ನು ಮೇ.31 ರವರೆಗೂ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು ಹಾಗೂ ಕೇರಳ ರಾಜ್ಯ ಜನತೆಗೆ ರಾಜ್ಯ ಪ್ರವೇಶಿಸಲು ಅವಕಾಶವಿಲ್ಲ ಎಂದು ಸಿಎಂ ಯಡಿಯೂರಪ್ಪ ಸುದ್ದಿಗಾರರಿಗೆ ವಿವರಿಸಿದರು. 
  • Blogger Comments
  • Facebook Comments

0 comments:

Post a Comment

Item Reviewed: ಬಸ್, ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ, ಪ್ರತೀ ಭಾನುವಾರ ಕಂಪ್ಲೀಟ್ ಲಾಕ್‍ಡೌನ್ Rating: 5 Reviewed By: karavali Times
Scroll to Top