ಬೆಂಗಳೂರು (ಕರಾವಳಿ ಟೈಮ್ಸ್) : ಮೂರನೆ ಹಂತದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಕ್ರೀಡಾ ಇಲಾಖೆಯಡಿ ಬರುವ ಫಿಟ್ನೆಸ್ ಸೆಂಟರ್‍ಗಳು, ಜಿಮ್‍ಗಳು ಮತ್ತು ಗಾಲ್ಫ್ ಕ್ಲಬ್ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ಮೇ 17ರ ನಂತರ ರಾಜ್ಯದಲ್ಲಿ ಕ್ರೀಡಾ ಇಲಾಖೆಯಡಿ ಬರುವ ಫಿಟ್ನೆಸ್ ಸೆಂಟರ್‍ಗಳು, ಜಿಮ್‍ಗಳನ್ನ ತೆರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದು, ಇದಕ್ಕೆ ಸಿಎಂ ಸಕಾರಾತ್ಮವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದರು.
ಲವ್ ಯುವರ್ ನೆಟೀವ್ ಎಂಬ ಹೊಸ ಚಿಂತನೆಯೊಂದಿಗೆ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದರು.
ಹೊಟೇಲ್‍ಗಳನ್ನು ತೆರೆಯಲು ಅವಕಾಶ ಕೇಳಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಹೊಟೇಲ್‍ಗಳು ಸೇವೆ ಆರಂಭಿಸಲು ಮನವಿ ಮಾಡಲಾಗಿದೆ. 17 ರ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ ಎಂದೂ ಸಚಿವರು ಹೇಳಿದರು.
0 comments:
Post a Comment