![]() |
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ |
ನವದೆಹಲಿ (ಕರಾವಳಿ ಟೈಮ್ಸ್) : ಕೇರಳ, ಒಡಿಶಾ ಮತ್ತು ಜಮ್ಮು, ಕಾಶ್ಮೀರ ಸೇರಿದಂತೆ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಕೊವಿಡ್-19 ಪ್ರಕರಣ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಗುರುವಾರ ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,561 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1084 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸಚಿವರು ತಿಳಿಸಿದರು. ಇತರ ದೇಶಗಳಿಗೆ ಹೋಲಿಸಿದರೆ, ಭಾರತವು ಉತ್ತಮ ಸ್ಥಿತಿಯಲ್ಲಿದೆ, ಏಕೆಂದರೆ ಕೊರೋನಾ ಸಾವಿನ ಪ್ರಮಾಣವು ಶೇಕಡಾ 3.3 ಮತ್ತು ಚೇತರಿಕೆ ಪ್ರಮಾಣ 28.83 ರಷ್ಟು ಎಂದರು.
ಒಟ್ಟು 35,902 ಸಕ್ರಿಯ ಪ್ರಕರಣಗಳಲ್ಲಿ, ಶೇ. 4.8 ರಷ್ಟು ರೋಗಿಗಳು ಐಸಿಯುನಲ್ಲಿದ್ದಾರೆ. ಶೇ. 1.1 ರಷ್ಟು ವೆಂಟಿಲೇಟರ್ ಮತ್ತು ಶೇ. 3.3 ರಷ್ಟು ರೋಗಿಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ ಎಂದರು. ದೇಶದಲ್ಲಿ ಇದುವರೆಗೆ ಒಟ್ಟಾರೆ 1,783 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
0 comments:
Post a Comment