ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ 29 ವರ್ಷದ ಯುವತಿಯಲ್ಲಿ ಶುಕ್ರವಾರ ಕೊರೋನಾ ಸೋಂಕು ದೃಢಪಟ್ಟಿದೆ. ತಾಲೂಕಿನ ಆರಂಬೋಡಿ ನಿವಾಸಿಯಾಗಿರುವ ಯುವತಿ ಇತ್ತೀಚೆಗೆ ಮುಂಬೈಯಿಂದ ಬಂದಿದ್ದು, ಜಿಲ್ಲಾಡಳಿತದ ವತಿಯಿಂದ ಬೆಳ್ತಂಗಡಿಯಲ್ಲಿ ಸ್ಥಾಪಿಸಲಾಗಿರುವ ಕ್ವಾರಂಟೈನ್ ಕೇಂದ್ರದಲ್ಲಿ ವಾಸ್ತವ್ಯ ಇರಿಸಲಾಗಿದೆ. ಇವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ವರದಿ ಬಂದಿದ್ದು, ಕೊರೊನಾ ದೃಢವಾಗಿದೆ. ಈಕೆಗೆ ಇದೀಗ ಚಿಕಿತ್ಸೆ ನೀಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡುತ್ತಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 62ಕ್ಕೇರಿದಂತಾಗಿದೆ. ಈ ದಿನ ಉಡುಪಿಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ.
0 comments:
Post a Comment