ಬಂಟ್ವಾಳ (ಕರಾವಳಿ ಟೈಮ್ಸ್) : ಮಂಗಳೂರು ಹೊರ ವಲಯದ ಪಡೀಲ್ ಬಳಿಯ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಾಣೆಮಂಗಳೂರು ಸಮೀಪದ ನರಿಕೊಂಬು ನಿವಾಸಿ ಕೋವಿಡ್-19 ಸೋಂಕಿತ ಮಹಿಳೆ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ನರಿಕೊಂಬು ನಿವಾಸಿ ರೋಗಿ ಸಂಖ್ಯೆ 501 ಮಹಿಳೆಯಲ್ಲಿ ಎಪ್ರಿಲ್ 26 ರಂದು ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿದ್ದರು. ಬಂಟ್ವಾಳದಲ್ಲಿ ಸೋಂಕು ತಗುಲಿ ಮೃತಪಟ್ಟಿದ್ದ ಮಹಿಳೆಯಿಂದ ಇವರಿಗೆ ಸೋಂಕು ಹರಡಿತ್ತು ಎನ್ನಲಾಗಿದೆ. ಇದೀಗ ಮಹಿಳೆ ಗುಣಮುಖರಾಗಿದ್ದು, ವೆನ್ಲಾಕ್ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
0 comments:
Post a Comment