ಮಂಗಳೂರು (ಕರಾವಳಿ ಟೈಮ್ಸ್) : ಭಾರತದಲ್ಲಿ ಸುಮಾರು 800ಕ್ಕಿಂತಲೂ ಹೆಚ್ಚು ಕಾಲೇಜುಗಳನ್ನು ಹೊಂದಿರುವ ಅತ್ಯಂತ ದೊಡ್ಡ ಆರೋಗ್ಯ ಮತ್ತು ವಿಜ್ಞಾನಗಳ ವಿಶ್ವವಿದ್ಯಾಲಯವಾಗಿರುವ ರಾಜೀವ್ ಗಾಂಧಿ ವೈಧ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಲಾಕ್‍ಡೌನ್ ಕಾರಣದಿಂದ ತಮ್ಮ ವ್ಯಾಸಂಗದ ಬಗ್ಗೆ ಯಾವುದೇ ಗೊಂದಲ, ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ರಾಜೀವ್ ಗಾಂಧಿ ವೈಧ್ಯಕೀಯ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಯು.ಟಿ. ಇಫ್ತಿಕಾರ್ ಅಲಿ ಭರವಸೆ ನೀಡಿದ್ದಾರೆ.
ವಿದೇಶಗಳ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಮೂರು ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳು ಈ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಮತ್ತು ಪೆÇೀಷಕರಿಗೆ ಯಾವುದೇ ಆತಂಕ, ಗೊಂದಲ ಬೇಡ. ಸಂಸ್ಥೆಯು ವಿವಿಧ ರೀತಿಯ ತಂತ್ರಜ್ಞಾನ ಬಳಸಿ ನೇರ ಶಿಕ್ಷಣ ನೀಡುವ ಚಿಂತನೆಯನ್ನು ನಡೆಸಲಾಗುತ್ತಿದೆ ಎಂದವರು ಹೇಳಿದ್ದಾರೆ.
0 comments:
Post a Comment