ಮುಂಬೈ (ಕರಾವಳಿ ಟೈಮ್ಸ್) : ಮುಂಬೈ-ಬಾಂದ್ರಾದಲ್ಲಿರುವ ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಸುದ್ದಿ ವಾಹಿನಿಯ ಇತರ ಇಬ್ಬರ ವಿರುದ್ಧ ಪೆÇಲೀಸರು ಭಾನುವಾರ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
ಪೈಧೋನಿ ಪೆÇಲೀಸ್ ಠಾಣೆಯಲ್ಲಿ ಅರ್ನಬ್ ಗೋಸ್ವಾಮಿ ಹಾಗೂ ಇತರ ಇಬ್ಬರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್‍ಡೌನ್ ವಿಸ್ತರಿಸಿದ ನಂತರ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಾಂದ್ರಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ಈ ಘಟನೆಗೂ ಬಾಂದ್ರಾದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಅರ್ನಬ್ ಅವರು ಮಸೀದಿಯ ಚಿತ್ರ ತೋರಿಸಿ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ರಝಾ ಎಜುಕೇಷನ್ ವೆಲ್ಫೇರ್ ಸೊಸೈಟಿ ಕಾರ್ಯದರ್ಶಿ ಇರ್ಫಾನ್ ಅಬೂಬಕರ್ ಶೈಖ್ ಎಂಬುವರು ಪೆÇಲೀಸರಿಗೆ ದೂರು ನೀಡಿದ್ದರು.
ಶೈಕ್ ದೂರಿನಂತೆ ಪೆÇಲೀಸರು ಅರ್ನಬ್ ಗೋಸ್ವಾಮಿ ಹಾಗೂ ಇತರೆ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295ಎ, 500, 511 ಮತ್ತು 120 ಬಿ ಅಡಿ ಎಫ್‍ಐಆರ್ ದಾಖಲಿಸಿದ್ದಾರೆ.
0 comments:
Post a Comment