ಬಂಟ್ವಾಳ (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಮಾರಕ ಕೊರೋನಾ ಸೋಂಕಿಗೆ 5ಮಂದಿ ಬಲಿಯಾಗಿರುವುದು ಅತ್ಯಂತ ನೋವಿನ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಮಾರಣಾಂತಿಕ ಘಟನೆಗಳು ಮರುಕಳಿಸದಿರಲಿ ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಹಾರೈಸಿದರು.
ತನ್ನ ಕ್ಷೇತ್ರ ವ್ಯಾಪ್ತಿಯ ತುಂಬೆ, ಮೇರೆಮಜಲು, ಪುದು ಮತ್ತು ಕಳ್ಳಿಗೆ ಕ್ಲಸ್ಟರ್ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಅಕ್ಷರ ದಾಸೋಹ ನೌಕರರಿಗೆ ತನ್ನ ವೈಯುಕ್ತಿಕ ನೆಲೆಯಲ್ಲಿ ಪರಂಗಿಪೇಟೆ ಸೇವಾಂಜಲಿ ಪ್ರತಿಷ್ಟಾನದ ಸಭಾಭವನದಲ್ಲಿ ರೇಶನ್ ಕಿಟ್ ವಿತರಿಸಿ ಅವರು ಮಾತನಾಡಿದ ಅವರು ಕೊರೊನಾ ಸೊಂಕು ಮಾರಕ ಕಾಯಿಲೆಯಾಗಿದ್ದು, ನಿರ್ಲಕ್ಷ್ಯ ವಹಿಸದೆ ಈ ಬಗ್ಗೆ ಅತ್ಯಂತ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಾಗಿದೆ. ಆದರೆ ವಿನಾ ಕಾರಣ ಜನ ಭಯಪಡುವುದು ಬೇಡ ಎಂದರು.
ಎಲ್ಲರೂ ಸೇರಿ ಕೊರೊನಾ ವಿರುದ್ದ ಹೋರಾಡಬೇಕಾಗಿದೆ. ಈ ಸಂದರ್ಭ ನಮಗಾಗಿ ಸೇವೆ ಮಾಡುತ್ತಿರುವ ಎಲ್ಲಾ ಸೇವಕರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಖಾದರ್ ಹೇಳಿದರು.
ಇದೇ ವೇಳೆ ಮಾತನಾಡಿದ ಜಿ ಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಅವರು ಕೊರೊನಾ ಸಂಕಷ್ಟದ ಅವಧಿಯಲ್ಲಿ ಸಮಾಜದ ಎಲ್ಲಾ ವರ್ಗದ ಜನರಿಗೆ ಮತ್ತು ಕೊರೊನಾ ವಾರಿಯರ್ಸ್‍ಗಳಿಗೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ವೈಯಕ್ತಿಕ ನೆಲೆಯಲ್ಲಿ ಕಿಟ್ ವಿತರಿಸಿದ್ದಾರೆ. ಸಂಕಷ್ಟದ ಅವಧಿಯಲ್ಲಿ ಯಾರಿಗೂ ತೊಂದರೆಯಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ ಎಂದರು.
ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅಧ್ಯಕ್ಷತೆ ವಹಸಿದ್ದರು. ಈ ಸಂದರ್ಭ ಸೇವಾಂಜಲಿ ಟ್ರಸ್ಟ್ ಸಂಚಾಲಕ ಕೃಷ್ಣ ಕುಮಾರ್ ಪೂಂಜಾ, ಉದ್ಯಮಿ ಮಹಾಬಲ ರೈ, ಬಂಟ್ವಾಳ ಪುರಸಭಾ ಸದಸ್ಯ. ಜನಾರ್ಧನ ಚೆಂಡ್ತಿಮಾರ್, ಗ್ರಾ.ಪಂ ಸದಸ್ಯರಾದ ಭಾಸ್ಕರ್ ರೈ, ಮುಹಮ್ಮದ್ ಮೋನು ಫರಂಗಿಪೇಟೆ, ಫೈಝಲ್ ಅಮ್ಮೆಮಾರ್, ಇಕ್ಬಾಲ್ ಸುಜೀರ್, ಅಂಗನವಾಡಿ ಮೇಲ್ವಿಚಾರಕಿ ಸುಜಾತಾ, ಅಂಗವಾಡಿ ಕಾರ್ಯಕರ್ತರ ಅಧ್ಯಕ್ಷೆ ರವಿಕಲಾ, ಪ್ರಮುಖರಾದ ವೃಂದ ಪೂಜಾರಿ ಮೇರಮಜಲು, ಇಂತಿಯಾಝ್ ತುಂಬೆ, ಮಜೀದ್ ಪೆರಿಮಾರ್, ಸಮೀಜ್ ಫರಂಗಿಪೇಟೆ, ಇಸ್ಮಾಯಿಲ್ ಹತ್ತನೇಮೈಲಿಕಲ್ಲು, ಅಷ್ವಧ್ ಫರಂಗಿಪೇಟೆ ಮೊದಲಾದವರು ಉಪಸ್ಥಿತರಿದ್ದರು. ಮೇರೆಮಜಲು ಗ್ರಾ.ಪಂ. ಸದಸ್ಯೆ ವೃಂದಾ ಪೂಜಾರಿ ಸ್ವಾಗತಿಸಿ, ವಂದಿಸಿದರು.
0 comments:
Post a Comment