ಮಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ಲಾಕ್‍ಡೌನ್‍ನಿಂದಾಗಿ ಅಲ್ಲಲ್ಲಿ ಬಾಕಿಯಾಗಿರುವ ಕಾರ್ಮಿಕರು ತಮ್ಮ ಊರಿಗೆ ಪ್ರಯಾಣಿಸಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಸಾರಿಗೆ ಸಂಸ್ಥೆಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡುವುದರ ಮೂಲಕ ಕಂಗಾಲಾಗಿರುವ ಪ್ರಯಾಣಿಕರಿಗೆ ಆಸರೆಯಾಗಿರುವ ಕಾರ್ಯ ನಿಜಕ್ಕೂ ಸಂಧಿಗ್ಧ ಪರಿಸ್ಥಿತಿಯಲ್ಲಿ ಕೈಗೊಂಡ ಮಾನವೀಯ ಕಾರ್ಯವಾಗಿದೆ ಎಂದು ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಪುದು ಗ್ರಾ.ಪಂ. ಸದಸ್ಯ ಹಾಶೀರ್ ಪೇರಿಮಾರ್ ಶ್ಲಾಘಿಸಿದ್ದಾರೆ.
ಬಾಕಿಯಾಗಿರುವ ಕಾರ್ಮಿಕರಿಗೆ ತಮ್ಮ ತಮ್ಮ ತವರಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿರುವುದಾಗಿ ಸರಕಾರ ಘೋಷಣೆ ಮಾಡಿದ ಸಂದರ್ಭದಲ್ಲಿ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದ ಕಾರ್ಮಿಕರು ಪ್ರಯಾಣ ದರದ ಹೆಚ್ಚಳದಿಂದಾಗಿ ಕಂಗಾಲಾಗಿದ್ದರು. ಸರಕಾರದ ಈ ಕ್ರಮ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇಂತಹ ಸನ್ನಿವೇಶದಲ್ಲಿ ಕಾರ್ಮಿಕರಿಗೆ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಂದಾಗಿದ್ದು ಕೆಎಸ್‍ಆರ್‍ಟಿಸಿ ಸಂಸ್ಥೆಗೆ 1 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಕಾಂಗ್ರೆಸ್ ತನ್ನ ಉದಾರತೆ ಹಾಗೂ ಮಾನವೀಯ ಸೇವೆಯನ್ನು ಮತ್ತೆ ಮುಂದುವರಿಸಿದೆ ಎಂದಿದ್ದಾರೆ.
ಕೆಪಿಸಿಸಿ ಕೊರೋನ ಪರಿಹಾರ ನಿಧಿಗಾಗಿ ದೇಣೆಗೆ ನೀಡಿರುವ ಹಣದಿಂದ ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಎಸ್‍ಆರ್‍ಟಿಸಿ ಸಂಸ್ಥೆಗೆ ಒಂದು ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಕಂಗಾಲಾಗಿರುವ ಪ್ರಯಾಣಿಕರು ಸುರಕ್ಷಿತವಾಗಿ ಊರಿಗೆ ಹೋಗಲು ಆಸರೆಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಹಾಶೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
0 comments:
Post a Comment