ನಾಲ್ವರಿಗೆ ಗಂಭೀರ ಗಾಯ
ಮಂಗಳೂರು (ಕರಾವಳಿ ಟೈಮ್ಸ್) : ನಗರದ ಹೊರವಲಯದ ಜೆಪ್ಪಿನಮೊಗರು ಸಮೀಪದ ಕಲ್ಲಾಪು ಎಂಬಲ್ಲಿ ಭಾನುವಾರು ಮುಂಜಾನೆ ರಸ್ತೆ ಬದಿ ನಿಂತಿದ್ದ ಕಂಟೈನರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಕಾವೂರು ನಿವಾಸಿ ಚೇತನ್ (21) ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ತೊಕ್ಕೊಟ್ಟು ಎಂಬಲ್ಲಿ ನಡೆದ ಮೆಹಂದಿ ಕಾರ್ಯಕ್ರಮ ಮುಗಿಸಿ ಭಾನುವಾರ ಮುಂಜಾನೆ 5 ಗಂಟೆ ವೇಳೆಗೆ ಕಾರಿನಲ್ಲಿ ಐದು ಮಂದಿ ವಾಪಾಸಾಗುತ್ತಿದ್ದ ವೇಳೆ ಜಪ್ಪಿನಮೊಗರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕಂಟೈನರ್‍ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಚೇತನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿ ಇದ್ದ ಇತರ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡ ನಾಲ್ವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಕದ್ರಿ ಟ್ರಾಫಿಕ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment