ಬೆಂಗಳೂರು (ಕರಾವಳಿ ಟೈಮ್ಸ್) : ಹೊರ ರಾಜ್ಯದಲ್ಲಿರುವ ಕನ್ನಡಿಗರು ಇನ್ನು ಕರ್ನಾಟಕಕ್ಕೆ ಬರಬಹುದು. ಲಾಕ್‍ಡೌನ್ ಘೋಷಣೆಗೂ ಮುನ್ನ ನೆರೆ ರಾಜ್ಯಕ್ಕೆ ಹೋಗಿರುವ ಕನ್ನಡಿಗರು ಪಾಸ್ ಪಡೆಯುವ ಮೂಲಕ ಮರಳಿ ಕರ್ನಾಟಕಕ್ಕೆ ಬರಬಹುದು.
ರಾಜ್ಯಕ್ಕೆ ಬರುವ ಕನ್ನಡಿಗರು ಸೇವಾ ಸಿಂಧು ವೆಬ್‍ಸೈಟ್‍ಗೆ ಭೇಟಿ ನೀಡಿ ವಿವರಗಳನ್ನು ಅಪ್ಲೋಡ್ ಮಾಡಬೇಕು. ವಿವರಗಳು ಸರಿಯಾಗಿದ್ದರೆ ಇ ಪಾಸ್ ಡೌನ್‍ಲೋಡ್ ಮಾಡಬಹುದು. ಇ ಪಾಸ್ ದೊರೆತ ದಿನದಿಂದ ಒಂದು ವಾರದವರೆಗೆ ಈ ಪಾಸ್ ಉರ್ಜಿತದಲ್ಲಿರುತ್ತದೆ. ಸ್ವಂತ ವಾಹನ, ಬಾಡಿಗೆ ವಾಹನ ಅಥವಾ ಬಸ್‍ಗಳ ಮೂಲಕವೂ ಪ್ರಯಾಣಿಸಬಹುದಾಗಿದೆ.
ವಾಹನದಲ್ಲಿ ಬರಬೇಕಾದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾದುದು ಕಡ್ಡಾಯ. ಕಾರಿನಲ್ಲಿ ಗರಿಷ್ಟ 3 ಮಂದಿ, ಎಸ್‍ಯುವಿ ವಾಹನದಲ್ಲಿ 5 ಮಂದಿ, ವ್ಯಾನಿನಲ್ಲಿ 10 ಮಂದಿ, ಬಸ್ಸಿನಲ್ಲಿ ಗರಿಷ್ಟ 25 ಮಂದಿ ಪ್ರಯಾಣಿಸಬಹುದು. ಯಾವ ಚೆಕ್ ಪೋಸ್ಟ್ ಮೂಲಕ ಅನುಮತಿ ನೀಡಲಾಗಿದೆಯೋ ಅದೇ ಚೆಕ್ ಪೋಸ್ಟ್ ಮೂಲಕ ಮಾತ್ರ ಪ್ರವೇಶ ನೀಡಲಾಗುತ್ತದೆ.
ವೆಬ್‍ಸೈಟಿಗ್ ಭೇಟಿ ನೀಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :
www.sevasindhu.karnataka.gov.in
0 comments:
Post a Comment