ಬಂಟ್ವಾಳ (ಕರಾವಳಿ ಟೈಮ್ಸ್) : ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ಶನಿವಾರ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿದರು.
ಬಂಟ್ವಾಳ ಪೇಟೆಯಲ್ಲಿ ಕೊರೊನಾ ಪ್ರಕರಣದ ಬಳಿಕ ಸೀಲ್‍ಡೌನ್ ಮುಂದುವರಿದಿದ್ದು, ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡರು. ಸೋಮವಾರ ಕಂಟೈನ್‍ಮೆಂಟ್ ವ್ಯಾಪ್ತಿಯ ಎಲ್ಲ ಮನೆಗಳಿಗೆ ಅವಶ್ಯಕ ದಿನಸಿ ಸಾಮಾಗ್ರಿ ಪೂರೈಸುವುದಾಗಿ ತಿಳಿಸಿ ಅಧಿಕಾರಿ ವರ್ಗ ಅಲ್ಲಿನ ಜನರ ಸಮಸ್ಯೆಗೆ ಸ್ಪಂದಿಸುವಂತೆ ಸೂಚಿಸಿದರು.
ಕುಡಿಯುವ ನೀರಿನ ಸಮರ್ಪಕ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ದುರಸ್ತಿ ಕಾರ್ಯಕ್ಕೆ ತಕ್ಷಣ ಕ್ರಮ ವಹಿಸುವಂತೆ ಶಾಸಕರು ತಿಳಿಸಿದರು.
ಸಭೆಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್, ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು, ಬಂಟ್ವಾಳ ನಗರ ಠಾಣಾ ಎಸ್ಸೈ ಅವಿನಾಶ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಇಂಜಿನಿಯರ್ ಡೊಮಿನಿಕ್ ಡಿ’ಮೆಲ್ಲೋ, ಬುಡಾ ಅಧ್ಯಕ್ಷ ಬಿ ದೇವದಾಸ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment