ಬಂಟ್ವಾಳ (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ಮೊಬೈಲ್ ಫಿವರ್ ಕ್ಲಿನಿಕ್‍ಗೆ ತಾಲೂಕಿನ ಸಿದ್ದಕಟ್ಟೆಯಲ್ಲಿ ಮಂಗಳವಾರ ಚಾಲನೆ ನೀಡಲಾಗಿದೆ.
ಬಂಟ್ವಾಳ ತಾಲೂಕಿನ ಹೆಚ್ಚು ಜನಸಂದಣಿ ಇರುವ ಪ್ರದೇಶದಲ್ಲಿ ಸರಕಾರಿ ವೈದ್ಯರು ಲಭ್ಯವಿಲ್ಲದೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಈ ಮೊಬೈಲ್ ಫಿವರ್ ಕ್ಲಿನಿಕ್ ಸಂಚರಿಸಿ ಆರೋಗ್ಯ ಸೇವೆ ನೀಡಲಿದೆ. ಈ ಸಂದರ್ಭ ಡಾ. ಹೇಮಪ್ರಭಾ, ಡಾ. ಇರ್ಫಾನಾ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದು 20 ಜನರಿಗೆ ಸೇವೆ ನೀಡಿದರು.
ಪ್ರತಿ ಮಂಗಳವಾರ ಪೂರ್ವಾಹ್ನ 10 ರಿಂದ 12ರವರೆಗೆ ಸಿದ್ದಕಟ್ಟೆ ಬಸ್ ನಿಲ್ದಾಣ ಮುಂಭಾಗದಲ್ಲಿ ಹಾಗೂ ಅಪರಾಹ್ನ 2ರಿಂದ 4ರವರೆಗೆ ಉಳಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಈ ಮೊಬೈಲ್ ಫಿವರ್ ಕ್ಲಿನಿಕ್ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬಹುದು ಎಂದು ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು ತಿಳಿಸಿದ್ದಾರೆ.
0 comments:
Post a Comment