ಲಾಕ್‍ಡೌನ್ 4 : 20 ಲಕ್ಷ ಕೋಟಿ ರೂಪಾಯಿ ಬೃಹತ್ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ - Karavali Times ಲಾಕ್‍ಡೌನ್ 4 : 20 ಲಕ್ಷ ಕೋಟಿ ರೂಪಾಯಿ ಬೃಹತ್ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ - Karavali Times

728x90

12 May 2020

ಲಾಕ್‍ಡೌನ್ 4 : 20 ಲಕ್ಷ ಕೋಟಿ ರೂಪಾಯಿ ಬೃಹತ್ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ



ನವದೆಹಲಿ (ಕರಾವಳಿ ಟೈಮ್ಸ್) : ಕೊರೋನಾ ತಡೆಗೆ ದೇಶಾದ್ಯಂತ ಚಾಲ್ತಿಯಲ್ಲಿರುವ ಲಾಕ್‍ಡೌನ್ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಐದನೇ ಬಾರಿಗೆ ಮಾತನಾಡಿದ್ದು, ಆತ್ಮ ನಿರ್ಭರ ಭಾರತ ಅಭಿಯಾನ ಘೋಷಿಸಿದ್ದಾರೆ.

    ಭಾರತ ಆತ್ಮ ನಿರ್ಭರ ದೇಶ ಆಗಬೇಕು. ಸ್ವಾವಲಂಬಿ ಭಾರತ ಎಂಬುದನ್ನು ನಾವು ತೋರಿಸಬೇಕು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಮಧ್ಯಮ ವರ್ಗಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ 20 ಲಕ್ಷ ಕೋಟಿ ರೂಪಾಯಿ ಬೃಹತ್ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ.

    ಕೋವಿಡ್ ಸಂಕಟ ಪ್ರಾರಂಭದಲ್ಲಿ ಭಾರತದಲ್ಲಿ ಪಿಪಿಇ ಕಿಟ್ ತಯಾರಾಗುತ್ತಿರಲಿಲ್ಲ, ಎನ್ 95 ಮಾಸ್ಕ್‍ಗಳು ಕೆಲವು ಸಂಖ್ಯೆಯಲ್ಲಿ ಮಾತ್ರವೇ ಉತ್ಪಾದನೆಯಾಗುತ್ತಿತ್ತು. ಈಗ ಭಾರತದಲ್ಲಿ ದಿನಂಪ್ರತಿ 2 ಲಕ್ಷ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್‍ಗಳನ್ನು ತಯಾರಿಸುತ್ತಿದೆ. ವಿಶ್ವವೇ ಒಂದು ಕುಟುಂಬ ಎಂಬುದು ನಮ್ಮ ಸಂಸ್ಕೃತಿಯಾಗಿದ್ದು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಇದು ಸಾಬೀತುಗೊಂಡಿದೆ ಎಂದು ಮೋದಿ ಹೇಳಿದ್ದಾರೆ.

    ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್ ದೇಶದ ಜಿಡಿಪಿಯ ಶೇ.10 ರಷ್ಟು ಇರಲಿದೆ. ಈ ಆರ್ಥಿಕ ಪ್ಯಾಕೇಜ್ ದೇಶದ ಕಾರ್ಮಿಕರು, ರೈತರು, ತೆರಿಗೆಯನ್ನು ಪ್ರಾಮಾಣಿಕವಾಗಿ ಪಾವತಿಸಿ, ದೇಶದ ಅಭಿವೃದ್ಧಿಗೆ ಸಹಕರಿಸುವ ಮಧ್ಯಮ ವರ್ಗಕ್ಕಾಗಿ ಘೋಷಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

    ಇದೇ ವೇಳೆ ಸ್ವಾವಂಬಿ ಭಾರತ ಆಗಬೇಕಾದರೆ ದೇಶದ ಜನತೆ ಖಾದಿ, ಹ್ಯಾಂಡ್ ಲೂಮ್ ರೀತಿಯ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಿ ಅದನ್ನು ಹೆಚ್ಚು ಪ್ರಚಾರ ಮಾಡುವಂತೆ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

    ನಾವು ಕೊರೋನಾ ಜೊತೆಯೇ ಜೀವಿಸುವುದನ್ನು ಕಲಿಯಬೇಕು, ಕೊರೋನಾ ಸವಾಲನ್ನು ನಾವು ಭಾರತವನ್ನು ಹೊಸ ಮನ್ವಂತರದೆಡೆಗೆ ಕರೆದೊಯ್ಯಲು ಬಳಸಿಕೊಳ್ಳಬೇಕು. ಮೇ. 18 ರ ನಂತರ ಲಾಕ್‍ಡೌನ್ ಹೊಸ ಸ್ವರೂಪದಲ್ಲಿ ಹೊಸ ಮಾರ್ಗಸೂಚಿಗಳೊಂದಿಗೆ ಬರಲಿದೆ. ರಾಜ್ಯಗಳ ಜೊತೆ ಚರ್ಚಿಸಿ ಮಾರ್ಗಸೂಚಿಗಳನ್ನು ಘೋಷಿಸಲಾಗುವುದು ಎಂದು ಮೋದಿ ಇದೇ ವೇಳೆ ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಲಾಕ್‍ಡೌನ್ 4 : 20 ಲಕ್ಷ ಕೋಟಿ ರೂಪಾಯಿ ಬೃಹತ್ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ Rating: 5 Reviewed By: karavali Times
Scroll to Top