ಸಾಮಾಜಿಕ ತಾಣಗಳಲ್ಲಿ ನಿಧನ ಎಂಬ ವದಂತಿ ವೈರಲ್
ಬೆಂಗಳೂರು (ಕರಾವಳಿ ಟೈಮ್ಸ್) : ಜಯ ಕರ್ನಾಟಕ ಸಂಘಟನೆಯ ಸ್ಥಾಪಕ, ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಯಾನ್ಸರ್‍ನಿಂದ ಬಳಲುತ್ತಿರುವ ಮುತ್ತಪ್ಪ ರೈ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ.
ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಬಗ್ಗೆ ಸುದ್ದಿ ಬರುತ್ತಿರುವ ಹಿನ್ನಲೆಯಲ್ಲಿ ಕೆಲ ಕಿಡಿಗೇಡಿಗಳು ಮುತ್ತಪ್ಪ ರೈ ನಿಧನ ಎಂಬ ಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿಯಬಿಟ್ಟಿದ್ದು, ಇದು ವದಂತಿಯಾಗಿ ವೈರಲ್ ಆಗುತ್ತಿದೆ. ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಗುರುವಾರ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಪ್ರಕಟವಾಗಲಿದೆ ಎಂದು ಪೂರ್ವ ವಲಯ ಡಿಸಿಪಿ ಶರಣಪ್ಪ ಮಾಹಿತಿ ನೀಡಿದ್ದಾರೆ.
0 comments:
Post a Comment