ಬೆಂಗಳೂರು (ಕರಾವಳಿ ಟೈಮ್ಸ್) : ಭೂಗತ ಲೋಕದ ಮಾಜಿ ಡಾನ್, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅಲ್ಪಕಾಲದ ಅನಾರೋಗ್ಯದಿಂ ಗುರುವಾರ ತಡರಾತ್ರಿ ನಿಧನರಾಗಿದ್ದಾರೆ.
ಕಳೆದ ಕೆಲ ಸಮಯಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಗುರುವಾರ ತಡ ರಾತ್ರಿ ವೇಳೆಗೆ ಮೃತಪಟ್ಟಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿರುವ ಎನ್. ಮುತ್ತಪ್ಪ ರೈ ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು. ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಕಾರ್ಯಪ್ರವೃತ್ತರಾಗಿದ್ದರು.
ಬುಧವಾರದಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈ ಸಂದರ್ಭ ಅವರು ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ಕೂಡಾ ವೈರಲ್ ಆಗಿತ್ತು. ಗುರುವಾರ ತಡರಾತ್ರಿ 2 ಗಂಟೆಯ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ಖಚಿತಪಡಿಸಿವೆ.
0 comments:
Post a Comment