ಬೆಂಗಳೂರು (ಕರಾವಳಿ ಟೈಮ್ಸ್) : ಲಾಕ್‍ಡೌನ್ 4.0 ಸಂದರ್ಭ ಅಂತರ್ ಜಿಲ್ಲೆ ಪ್ರಯಾಣಕ್ಕೆ ಪಾಸ್ ಅಗತ್ಯವಿಲ್ಲ ಎಂದು ರಾಜ್ಯ ಪೆÇಲೀಸ್ ಮಹಾ ನಿರ್ದೇಶಕರು ತಿಳಿಸಿದ್ದಾರೆ.
ಈ ಬಗ್ಗೆ ಡಿಜಿಪಿ ಕರ್ನಾಟಕ ಟ್ವಿಟ್ಟರ್‍ನಲ್ಲಿ ಸ್ಪಷ್ಟನೆ ನೀಡಲಾಗಿದ್ದು, ಪ್ರಯಾಣ ಮಾಡುವಾಗ ಅಗತ್ಯ ವಸ್ತುಗಳನ್ನು, ದಾಖಲೆಗಳನ್ನು ಕೊಂಡೊಯ್ಯಿರಿ ಎಂದು ಸೂಚನೆ ನೀಡಿದ್ದಾರೆ. ಮಾರ್ಚ್ 25 ರಿಂದ ಹೊರಡಿಸಲಾಗಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರಲಿಲ್ಲ. ಬಳಿಕ ಕೊಂಚ ವಿನಾಯ್ತಿ ಪ್ರಕಟಿಸಿ ಪಾಸ್ ಪಡೆದು ನಿಯಮಕ್ಕೆ ಬದ್ದರಾಗಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಆದರೆ ಇದೀಗ ರಾಜ್ಯ ಸರಕಾರ ಬಹುತೇಕ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಸಿದ್ದು, ಜಿಲ್ಲೆಗಳೊಳಗೆ ವಾಹನ ಸಂಚಾರಕ್ಕೆ ಇನ್ನು ಮುಂದೆ ಪಾಸ್ ಅಗತ್ಯವಿಲ್ಲ ಎಂದು ಹೇಳಿದೆ. ಸಾಯಂಕಾಲ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಲಾಗಿದೆ.
ಈ ಹಿಂದಿನ ನಿಯಮದ ಪ್ರಕಾರ, ಸರಕಾರಿ ನೌಕರರು, ಸಿಬ್ಬಂದಿಗೆ, ಕಂಪೆನಿಗಳ ಉದ್ಯೋಗಿಗಳಿಗೆ ಅಂತರ್ ಜಿಲ್ಲಾ ಪಾಸ್ ಅಗತ್ಯವಿಲ್ಲ. ಪೆÇಲೀಸರಿಗೆ ಐಡಿ ಕಾರ್ಡ್ ತೋರಿಸಿದರೆ ಅನುಮತಿ ನೀಡಲಾಗುತ್ತದೆ. ಅದೇ ರೀತಿ ಟ್ಯಾಕ್ಸಿಯಲ್ಲಿ ಚಾಲಕರೊಂದಿಗೆ ಇಬ್ಬರು, ಮ್ಯಾಕ್ಸಿ ಕ್ಯಾಬ್‍ನಲ್ಲಿ ಮೂರು ಜನ ಮತ್ತು ಚಾಲಕರು ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ಆದರೆ ಪ್ರಯಾಣಿಕರಿಗೆ ಪಾಸ್ ಕಡ್ಡಾಯ ಎಂದು ಸೂಚಿಸಲಾಗಿತ್ತು. ಆದರೆ ಈಗ ಖಾಸಗಿ ವಾಹನದಲ್ಲಿ ಹೋಗುವವರಿಗೂ ಪಾಸ್ ಅಗತ್ಯವಿಲ್ಲ ಎಂದು ಘೋಷಿಸಲಾಗಿದೆ.
0 comments:
Post a Comment