ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪತ್ರ : ಸಚಿವ ಈಶ್ವರಪ್ಪ - Karavali Times ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪತ್ರ : ಸಚಿವ ಈಶ್ವರಪ್ಪ - Karavali Times

728x90

5 May 2020

ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪತ್ರ : ಸಚಿವ ಈಶ್ವರಪ್ಪ

 

 

ಪಂಚಾಯತ್‍ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕೆ ಅಥವಾ ಈಗಿರುವ ಪಂಚಾಯತ್ ಸದಸ್ಯರ ಅಧಿಕಾರಾವಧಿಯನ್ನು ವಿಸ್ತರಿಸಿ ಮುಂದುವರೆಸಬೇಕೇ ಎನ್ನುವ ಕುರಿತು ಸಮಗ್ರ ಚರ್ಚೆ


ಬೆಂಗಳೂರು (ಕರಾವಳಿ ಟೈಮ್ಸ್) : ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರಾವಧಿ ಈ ತಿಂಗಳು ಮುಕ್ತಾಯವಾಗುತ್ತಿದ್ದು, ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‍ಗಳ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

    ಮಂಗಳವಾರ ನಗರದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಮುಖ ಸಚಿವರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರದ ಅವಧಿ ಮುಕ್ತಾಯವಾಗುತ್ತಿದ್ದು, ಈ ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ, ಕೊರೋನಾ ಸೋಂಕಿನ ಕಾರಣ ಚುನಾವಣೆ ಮುಂದೂಡುವ ಅನಿವಾರ್ಯತೆ ಎದುರಾಗಿದೆ. ಚುನಾವಣೆ ಮುಂದೂಡುವ ಸರಕಾರದ ಪ್ರಸ್ತಾವನೆಗೆ ಚುನಾವಣಾ ಆಯೋಗ ಸಕರಾತ್ಮಾಕವಾಗಿ ಸ್ಪಂದಿಸುವ ವಿಶ್ವಾಸವಿದೆ ಎಂದು ಹೇಳಿದರು.

    ಸದಸ್ಯರ ಅಧಿಕಾರವಾಧಿ ಮುಗಿದ ನಂತರ ಪಂಚಾಯತ್‍ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕೆ ಅಥವಾ ಈಗಿರುವ ಪಂಚಾಯತ್ ಸದಸ್ಯರ ಅಧಿಕಾರಾವಧಿಯನ್ನು ವಿಸ್ತರಿಸಿ ಮುಂದುವರೆಸಬೇಕೇ ಎನ್ನುವ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

    ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಎನ್ನುವ ಕುರಿತು ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮೊದಲಾದವರು ಪಾಲ್ಗೊಂಡಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪತ್ರ : ಸಚಿವ ಈಶ್ವರಪ್ಪ Rating: 5 Reviewed By: karavali Times
Scroll to Top