ಬೆಂಗಳೂರು (ಕರಾವಳಿ ಟೈಮ್ಸ್) : ಲಾಕ್‍ಡೌನ್-03 ಘೋಷಣೆಯಾಗಿರುವುರಿಂದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡು ಊರಿಗೆ ಹೋಗಲು ಪರದಾಡುತ್ತಿರುವ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತಿತರರಿಗೆ ಅನುಕೂಲವಾಗುವಂತೆ ಒಂದು ದಿನ ಅಥವಾ ಏಕಮುಖ ಸಂಚಾರಕ್ಕೆ ಪಾಸ್ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಒಂದು ದಿನ, ಒಂದು ಕಡೆಗೆ ಹೋಗಲು ಮಾತ್ರ ಈ ಪಾಸ್ ಬಳಸಬಹುದು. ಅಂತರ್ ಜಿಲ್ಲೆಗಳಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ.
ಪಾಸ್ ಬೇಕಾದವರು ತಮ್ಮ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಥವಾ ಕಮಿಷನರೇಟ್‍ಗಳಲ್ಲಿ ಉಪ ಪೆÇಲೀಸ್ ಕಮಿಷನರ್‍ಗೆ ಪಾಸ್‍ಗಳನ್ನು ವಿತರಿಸಲು ಅಧಿಕಾರ ನೀಡಲಾಗಿದೆ. ಊರುಗಳಿಗೆ ಹಿಂತಿರುಗುವ ಜನರ ಪ್ರಯಾಣದ ಸಮಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶ, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪಾಸ್ ಪಡೆದವರು ಪ್ರಯಾಣಿಸುವ ಜಿಲ್ಲೆಗಳಲ್ಲಿ ಅಧಿಕಾರಿಗಳು ಆರೋಗ್ಯ ತಪಾಸಣೆ ನಡೆಸಬೇಕು. ಒಂದು ವೇಳೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದರೆ ಕೂಡಲೇ ಅವರನ್ನು ಕೋವಿಡ್ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
0 comments:
Post a Comment