ಕೊರೋನಾ ಎಫೆಕ್ಟ್ : ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ಬಿಎಸ್‍ವೈ ಸರಕಾರ - Karavali Times ಕೊರೋನಾ ಎಫೆಕ್ಟ್ : ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ಬಿಎಸ್‍ವೈ ಸರಕಾರ - Karavali Times

728x90

19 May 2020

ಕೊರೋನಾ ಎಫೆಕ್ಟ್ : ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ಬಿಎಸ್‍ವೈ ಸರಕಾರ




ಬೆಂಗಳೂರು (ಕರಾವಳಿ ಟೈಮ್ಸ್) : ಕೋವಿಡ್-19 ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾಸಗಿ ವಾಹನ ಮಾಲೀಕರಿಗೂ ರಿಯಾಯಿತಿಯೊಂದನ್ನು ಘೋಷಿಸಿದ್ದಾರೆ.

    ರಾಜ್ಯದ ಖಾಸಗಿ ಬಸ್, ಟೆಂಪೆÇೀ, ಟ್ಯಾಕ್ಸಿಗಳಿಗೆ ಮೋಟಾರು ವಾಹನ ತೆರಿಗೆ ವಿನಾಯ್ತಿ ನೀಡಿ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯದ ವಿವಿಧ ಪ್ರದೇಶದಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸೇರಿಸಲು ಖಾಸಗಿ ವಾಹನಗಳು ರಸ್ತೆಗೆ ಇಳಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ, ಜಿಲ್ಲಾಡಳಿತ ಇಲ್ಲವೆ ಅಧಿಕೃತ ಪ್ರಾಧಿಕಾರಗಳಿಂದ ಸಂಚಾರಕ್ಕೆ ಅನುಮತಿ ಪಡೆದ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದೆ. ಈ ಪ್ರಕಾರ ರಾಜ್ಯದ ಖಾಸಗಿ ವಾಹನಗಳಿಗೆ ಸರಕಾರವು ಒಟ್ಟು ಎರಡು ತಿಂಗಳ ತೆರಿಗೆ ವಿನಾಯ್ತಿ ನೀಡಿ ಅಧಿಸೂಚನೆ ಹೊರಡಿಸಿದೆ.

    ಕೋವಿಡ್-19 ಹಿನ್ನೆಲೆ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್‍ಡೌನ್ ಮಾಡಲಾಗಿದೆ. ಆದರೆ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 16(1)ರ ಅನ್ವಯ ರಾಜ್ಯದಲ್ಲಿ ನೋಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಪ್ರಯಾಣಿಕರು ಮತ್ತು ಸರಕು ಸಾರಿಗೆ ವಾಹನಗಳ ತೆರಿಗೆಯನ್ನು ಮಾರ್ಚ್ 24 ರಿಂದ ಮೇ 23 ರವರೆಗೆ ಒಟ್ಟು ಎರಡು ತಿಂಗಳ ಅವಧಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.
  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ಎಫೆಕ್ಟ್ : ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ಬಿಎಸ್‍ವೈ ಸರಕಾರ Rating: 5 Reviewed By: karavali Times
Scroll to Top