ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಪುರಸಭಾ ಸದಸ್ಯರಾದ ಹಸೈನಾರ್ ರವರ ವಾರ್ಡಿನ ಶಾಂತಿಯಂಗಡಿ ಮತ್ತು ತಾಳಿಪಡ್ಪು ಪರಿಸರದ ಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಗ್ರಿಗಳನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ವಿತರಿಸಲಾಯಿತು.
ಈ ಸಂದರ್ಭ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬೇಬಿ ಕುಂದರ್, ಮಿತ್ತಬೈಲು ಮಸೀದಿ ಖತೀಬ್ ಅಶ್ರಫ್ ಫೈಝಿ ಕೊಡುಗು, ತಾಳಿಪಡ್ಪು ಹಿದಾಯತುಲ್ ಇಸ್ಲಾಂ ಮದ್ರಸ ಕಮಿಟಿ ಅಧ್ಯಕ್ಷ ಸಯ್ಯದ್ ಫಲುಲು ತಂಗಳ್ ಮೊದಲಾದವರು ಉಪಸ್ಥಿತರಿದ್ದರು.
Nishanth
ReplyDelete