ಬೆಂಗಳೂರು (ಕರಾವಳಿ ಟೈಮ್ಸ್) : ಬಂಟ್ವಾಳದಲ್ಲಿ ನದಿಗೆ ಹಾರಿದ ಹಿಂದೂ ಯುವಕನನ್ನು ರಕ್ಷಿಸಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ ನಾಲ್ವರು ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಹುಪರಾಕ್ ವ್ಯಕ್ತಪಡಿಸಿದ್ದಾರೆ.
ಧರ್ಮದ ಹೆಸರಲ್ಲಿ ಮನೆ-ಮನಸ್ಸುಗಳನ್ನು ಒಡೆಯುವ ವಿಚ್ಛಿದ್ರಕಾರಿ ಕೃತ್ಯಗಳ ನಡುವೆ ಭವಿಷ್ಯದ ಬಗ್ಗೆ ಭರವಸೆ ಮೂಡಿಸಿರುವ ಈ ಯುವಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಿದ್ದರಾಮಯ್ಯ ತಮ್ಮ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ |
0 comments:
Post a Comment