ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಒಂದು ಶಿಕ್ಷಣ ಸಚಿವ ಸುರೇಶ್ ಪ್ರಮುಖ ಮಾಹಿತಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ಮಾಹಿತಿಗಳು ಅಧಿಕೃತವಲ್ಲ. ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸರಕಾರ ಸ್ಪಷ್ಟ ತೀರ್ಮಾನ ಕೈಗೊಂಡ ಬಳಿಕ ಈ ಬಗ್ಗೆ ವಿವರವಾದ ಮಾಹಿತಿಯನ್ನು ಖುದ್ದು ನಾನೇ ನೀಡುತ್ತೇನೆ ಎಂದು ಶಿಕ್ಷಣ ಸುರೇಶ್ ಕುಮಾರ್ ತಿಳಿಸಿದ್ದಾರೆ.
0 comments:
Post a Comment