ಮಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ಸಂಕಷ್ಟದ ಲಾಕ್‍ಡೌನ್ ಅವಧಿಯು ಜನಸಾಮಾನ್ಯರನ್ನೆಲ್ಲಾ ಕಷ್ಟದ ಕೂಪಕ್ಕೆ ತಳ್ಳಿದೆ. ತಮ್ಮ ದೈನಂದಿನ ಖರ್ಚಿಗಾಗಿ ದಿನದ ದುಡಿಮೆಯಲ್ಲೇ ಜೀವನ ಸಾಗಿಸುತ್ತಿದ್ದ ಕುಟುಂಬಗಳು ಇಂದು ಒಂದೊತ್ತಿನ ಊಟಕ್ಕಾಗಿ ಕೈಚಾಚುವ ಸ್ಥಿತಿ ನಿರ್ಮಾಣಗೊಂಡಿದೆ. ಇಂತಹ ಸಂಕಷ್ಟದ ಈ ಸಂದರ್ಭದಲ್ಲಿ ಲಾಕ್‍ಡೌನ್ ಅವಧಿಯ ಮೂರು ತಿಂಗಳುಗಳ ಕಾಲದ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿಯ ವತಿಯಿಂದ ತೊಕ್ಕೊಟ್ಟು ಚಂಬುಗುಡ್ಡೆಯಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಈ ಕೋರೋನಾ ಕಷ್ಟ ಕಾಲದಲ್ಲಿ ಮೆಸ್ಕಾಂ ಸಂಸ್ಥೆ ಜನಸಾಮಾನ್ಯರ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ಜೀವನ ನಡೆಸುವ ಹೋರಾಟದಲ್ಲಿರುವ ಜನರ ಜೊತೆ ನಿಲ್ಲಬೇಕಾಗಿದೆ. ಮೆಸ್ಕಾಂ ಈವರೆಗೆ ಜಿಲ್ಲೆಯಲ್ಲಿ ಲಾಭದಾಯಕವಾಗಿ ಮುನ್ನಡೆದಿದೆ. ವಿದ್ಯುತ್ ಅನ್ನೋದು ಸೇವಾಕ್ಷೇತ್ರ. ಈ ಸಂದರ್ಭದಲ್ಲಾದರೂ ಮೆಸ್ಕಾಂ ಸೇವಾ ಮನೋಭಾವನೆಯಿಂದ ವರ್ತಿಸಬೇಕಾಗಿದೆ. ಮೆಸ್ಕಾಂ ಸಂಸ್ಥೆಯು ಜನಸಾಮಾನ್ಯರ ಮೂರು ತಿಂಗಳ ವಿದ್ಯುತ್ ದರ ಮನ್ನಾ ಮಾಡಬೇಕು ಹಾಗೂ ಆರು ತಿಂಗಳವರೆಗೆ ಬಿಲ್ಲು ಪಾವತಿಸಲು ಬಲವಂತ ಪಡಿಸದೆ, ಸಮಯಾವಕಾಶ ನೀಡಬೇಕೆಂದು ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿಯ ಪರವಾಗಿ ಒತ್ತಾಯಿಸಲಾಯಿತು.
ಮನವಿ ನೀಡಿದ ನಿಯೋಗದಲ್ಲಿ ಡಿವೈಎಫ್‍ಐ ಉಳ್ಳಾಲ ವಲಯಾಧ್ಯಕ್ಷ ಅಶ್ರಫ್ ಕೆ.ಸಿ.ರೋಡ್, ಕಾರ್ಯದರ್ಶಿ ಸುನಿಲ್ ತೇವುಲ, ಜಿಲ್ಲಾ ನಾಯಕ ನಿತಿನ್ ಕುತ್ತಾರ್, ವಲಯ ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಸಹ ಕಾರ್ಯದರ್ಶಿ ಅಶ್ಫಾಕ್ ಅಳೇಕಲ ಮೊದಲಾದವರಿದ್ದರು.
0 comments:
Post a Comment