ಉಮರ್ ಫಾರೂಕ್ ಪರಂಗಿಪೇಟೆ |
ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮರ್ ಫಾರೂಕ್ ಪರಂಗಿಪೇಟೆ ಅವರನ್ನು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿ ನೇಮಿಸಲಾಗಿದೆ.
ಪಕ್ಷವನ್ನು ಬೇರು ಮಟ್ಟದಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಬೂತ್ ಹಂತದಿಂದ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಪ್ರತಿ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಗಳಾಗಿ ಹಾಗೂ ಸಂಯೋಜಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನೇಮಕ ಮಾಡಿದ್ದು, ಅದರಂತೆ ಉಮರ್ ಫಾರೂಕ್ ಅವರನ್ನು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಡಿ ಕೆ ಶಿವಕುಮಾರ್ ಅವರು ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಮಾರ್ಗಸೂಚಿಗಳನ್ನು ನೀಡಲಾಗಿದೆ. ಪ್ರತಿಯೊಬ್ಬ ಉಸ್ತುವಾರಿಗಳು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯ ಜವಾಬ್ದಾರಿಯನ್ನು ವಹಿಸಿಕೊಂಡು ಸ್ಥಳೀಯ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಸಂಪರ್ಕಿಸಿ ಪದಗ್ರಹಣ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ಮಾಡಲಾಗಿದೆ.
0 comments:
Post a Comment