ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಕೊರೋನಾ ಸೋಂಕು ನಿತ್ಯವೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನ ಸ್ವಯಂ ನಿಯಂತ್ರಣಕ್ಕೆ ಒಳಗಾಗದಿದ್ದರೆ ಇನ್ನು ಮುಂದೆ ಸರಕಾರವೇ ನಿಯಂತ್ರಣ ವಿಧಿಸಲು ಮುಂದಾಗಿದೆ. ಸರಕಾರದ ನಿರಂತರ ಎಚ್ಚರಿಕೆಯ ಮಧ್ಯೆಯೂ ಜನ ನಿರ್ಲಕ್ಷ್ಯ ವಹಿಸುತ್ತಿರುವುದು ಸರಕಾರದ ಚಿಂತೆಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ರಹಿತವಾಗಿ ಸಂಚರಿಸುವುದು ಕಂಡು ಬಂದರೆ ದಂಡ ವಿಧಿಸಲು ಮುಂದಾಗಿದೆ.
ಕೊರೋನಾ ಪೀಡಿತರ ಸಾರ್ವಜ£ಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಹಾಕದಿದ್ದರೆ ದಂಡ ಎಂಬ ನಿಯಮವನ್ನು ಈಗಾಗಲೇ ಕೆಲವು ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ. ಇದೀಗ ಕರ್ನಾಟಕ ಕೂಡ ಇದೇ ನಿರ್ಧಾರಕ್ಕೆ ಬಂದಿದೆ. ಜನತೆಯ ಸುರಕ್ಷತೆಗಾಗಿ ರಾಜ್ಯ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದೆ ನಿಯಮ ಉಲ್ಲಂಘಿಸುವವರಿಗೆ 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಕೊರೋನಾ ಸೋಂಕು ತಗುಲಿರಬಹುದು ಎನ್ನುವ ಸಂದೇಹದ ಮೇಲೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಗಾದ ನಂತರ ಶಂಕಿತ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬರದೆ ಇದ್ದಲ್ಲಿ, ಅಂತಹವರನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಬಹುದೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಈ ಕುರಿತು ಇಲಾಖೆ ಆದೇಶ ಹೊರಡಿಸಿದ್ದು, ಒಂದು ವಾರದ ಬಳಿಕ ಸೋಂಕಿನ ಲಕ್ಷಣಗಳಿಲ್ಲದ ವ್ಯಕ್ತಿಯನ್ನು ಆರ್.ಟಿ.ಪಿ.ಸಿ.ಆರ್ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯವಿಲ್ಲ, ಕೇವಲ ಥರ್ಮಲ್ ಸ್ಕ್ರೀನಿಂಗ್ ಮಾಡಿ ಹೋಂ ಕ್ವಾರಟೈನ್‍ಗೆ ಒಳಪಡಿಸಬಹುದು ಎಂದು ತಿಳಿಸಲಾಗಿದೆ.
0 comments:
Post a Comment