ಸಹಕಾರಿ ಬ್ಯಾಂಕುಗಳು ಆರ್‍ಬಿಐ ವ್ಯಾಪ್ತಿಗೆ : ಕೇಂದ್ರ ಸರಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ - Karavali Times ಸಹಕಾರಿ ಬ್ಯಾಂಕುಗಳು ಆರ್‍ಬಿಐ ವ್ಯಾಪ್ತಿಗೆ : ಕೇಂದ್ರ ಸರಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ - Karavali Times

728x90

27 June 2020

ಸಹಕಾರಿ ಬ್ಯಾಂಕುಗಳು ಆರ್‍ಬಿಐ ವ್ಯಾಪ್ತಿಗೆ : ಕೇಂದ್ರ ಸರಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ



ನವದೆಹಲಿ (ಕರಾವಳಿ ಟೈಮ್ಸ್) : ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‍ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರಕಾರದ ಪ್ರಮುಖ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.

ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದರಡಿಯಲ್ಲಿ ತರುವ ಕುರಿತು ಈ ಹಿಂದೆ ಕೇಂದ್ರ ಸರಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಕುರಿತಂತೆ ನಡೆದಿದ್ದ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು ಕೇಂದ್ರ ಸರಕಾರ ಈ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಬಳಿಕ ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ  ಹಾಕಿದ್ದಾರೆ.

ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ-2020 ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಸರಕಾರ ಮುಂದಾಗಿತ್ತು. ಆದರೆ ಕೋವಿಡ್-19 ಕಾರಣಕ್ಕಾಗಿ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ ಪಾಸ್ ಆಗಿರಲಿಲ್ಲ. ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಿರುವ ಗ್ರಾಹಕರ ಹಿತವನ್ನು ಕಾಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರಕಾರ ತಿಳಿಸಿತ್ತು.

ಕಳೆದ ವರ್ಷ ಪಂಜಾಬ್ ಮಹಾರಾಷ್ಟ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತವನ್ನು ಸರಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ವರ್ಷದ ಬಜೆಟ್‍ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್‍ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕುಗಳನ್ನು ತರಲಾಗುವುದು ಎಂದು ತಿಳಿಸಿದ್ದರು.

ಇತ್ತೀಚೆಗಷ್ಟೇ ಕರ್ನಾಟಕದಲ್ಲೂ ಇಂತಹುದೇ ಹಗರಣ ಕೇಳಿಬಂದಿತ್ತು. ಬೆಂಗಳೂರಿನ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನಲ್ಲೂ ಇತ್ತೀಚೆಗೆ ಹಗರಣ ನಡೆದಿದ್ದು, ಆರ್‍ಬಿಐ ಈ ಬ್ಯಾಂಕಿನ ವ್ಯವಹಾರದ ಮೇಲೆ ನಿರ್ಬಂಧಗಳನ್ನು ವಿಧಿಸಿ ತನಿಖೆ ನಡೆಸಿದೆ.








  • Blogger Comments
  • Facebook Comments

0 comments:

Post a Comment

Item Reviewed: ಸಹಕಾರಿ ಬ್ಯಾಂಕುಗಳು ಆರ್‍ಬಿಐ ವ್ಯಾಪ್ತಿಗೆ : ಕೇಂದ್ರ ಸರಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ Rating: 5 Reviewed By: karavali Times
Scroll to Top