ನವದೆಹಲಿ (ಕರಾವಳಿ ಟೈಮ್ಸ್) : ಕೋವಿಡ್-19 ವೈರಸ್ಸಿಗೆ ಔಷಧಿ ಕಂಡು ಹಿಡಿದಿದ್ದು, ಏಳೇ ದಿನಗಳಲ್ಲಿ ಸೋಂಕಿತ ರೋಗಿಯನ್ನು ಗುಣಪಡಿಸುವ ಸಾಮರ್ಥ್ಯ ಈ ಔಷಧಿಗೆ ಇದೆ ಎಂದು ಸಾರಿದ್ದ ಯೋಗ ಗುರು ಬಾಬಾ ರಾಮ್ ದೇವ್ ಅವರಿಗೆ ತೀವ್ರ ಹಿನ್ನಡೆಯಾಗುವ ಸನ್ನಿವೇಶ ಉಂಟಾಗಿದ್ದು, ಅವರ ಔಷಧಿಗೆ ಆಯುಷ್ ಸಚಿವಾಲಯ ತಡೆ ನೀಡಿದೆ. ಅಲ್ಲದೆ ಔಷಧಿಗೆ ಸಂಬಂಧಿಸಿದಂತೆ ವಿವರ ನೀಡುವಂತೆ ಪತಂಜಲಿ ಸಂಸ್ಥೆಗೆ ಸೂಚಿಸಿದೆ.
ಪತಂಜಲಿ ಕಂಪನಿಯೂ ಕೊವಿಡ್-19 ಔಷಧಿ ಪರಿಶೀಲಿಸುವವರೆಗೆ, ಆ ಕುರಿತು ಜಾಹೀರಾತು ಮಾಡುವುದನ್ನು ನಿಲ್ಲಿಸಬೇಕು ಎಂದು ಆಯುಷ್ ಸಚಿವಾಲಯ ಆದೇಶಿಸಿದೆ.
ಕೊವಿಡ್-19 ಔಷಧಿ ಕುರಿತ ಪತಂಜಲಿ ಜಾಹೀರಾತು, ಔಷಧಗಳು ಮತ್ತು ಪರಿಹಾರಗಳ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ, 1954 ರ ಅಡಿ ಬರುತ್ತದೆ ಎಂದು ಎಚ್ಚರಿಕೆ ನೀಡಿದೆ.
ಇದೇ ವೇಳೆ ಕೊವಿಡ್ -19 ಚಿಕಿತ್ಸೆಗಾಗಿ ಕೊರೋನಿಲ್ ಔಷಧಿಗೆ ಅನುಮತಿ ಪಡೆದಿರುವ ಬಗ್ಗೆ ಮಾಹಿತಿ ನೀಡುವಂತೆ ಉತ್ತರಾಖಂಡ್ ಸರ್ಕಾರದ ರಾಜ್ಯ ಪರವಾನಗಿ ಪ್ರಾಧಿಕಾರಕ್ಕೆ ಆಯುಷ್ ಸಚಿವಾಲಯ ಸೂಚಿಸಿದೆ.
ಮಂಗಳವಾರ ಬೆಳಗ್ಗೆಯಷ್ಟೇ ಬಾಬಾ ರಾಮ್ ದೇವ್ ಅವರ ಪತಂಜಲಿ ಯೋಗಪೀಠ ಕೊರೋನಿಲ್ ಔಷಧಿ ಬಿಡುಗಡೆಗೊಳಿಸಿತ್ತು. ಪತಂಜಲಿ ಬಿಡುಗಡೆಗೊಳಸಿರುವ ಔಷಧಿಗೆ ಕೊರೋನಿಲ್ ಎಂಬ ಹೆಸರು ನೀಡಲಾಗಿದ್ದು, ಕೊರೋನಾ ವೈರಸ್ ಚಿಕಿತ್ಸೆಗೆ ಇದು ಪ್ರಭಾವಶಾಲಿಯಾಗಿದೆ ಎಂದು ಸಂಸ್ಥೆ ಹೇಳಿಕೊಂಡಿತ್ತು.
ಈ ಕುರಿತಂತೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್ ದೇವ್ ಅವರು, ಪತಂಜಲಿ ರಿಸರ್ಚ್ ಇನ್ಸ್ಟಿಟ್ಯೂಟ್ (PRI) ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (NIMS), ಜೈಪುರ್ ಸಂಶೋಧಕರು ಜಂಟಿಯಾಗಿ ಈ ಔಷಧಿಯನ್ನು ಸಿದ್ಧಪಡಿಸಿದ್ದಾರೆ. ಔಷಧಿಯನ್ನು ತಯಾರಿಸುವ ಕೆಲಸ ಪತಂಜಲಿ ಹಾಗೂ ದಿವ್ಯ ಫಾರ್ಮಸಿ ಜಂಟಿಯಾಗಿ ನಡೆಸಲಿವೆ ಎಂದು ಹೇಳಿಕೊಂಡಿದ್ದರು.
Ramdev ko bamboo saali.....aur haramkhor balkrishan ko maar maar ke Nepal bhagao..
ReplyDelete